ಖಾಸಗಿ ಶಾಲೆಗಳಿಂದ ಶೋಷಣೆ: ಜಯ ಕರ್ನಾಟಕ ಸಂಘ ಪ್ರತಿಭಟನೆ
ಮಾಲೂರು: ತಾಲೂಕಿನಲ್ಲಿ ಖಾಸಗಿ ಶಾಲೆಗಳು ದುಬಾರಿ ಶುಲ್ಕ ಪಡೆಯುವುದು ಮಾತ್ರವಲ್ಲದೆ, ನೋಟ್ಬುಕ್ ಹಾಗೂ ಪುಸ್ತಕಗ ದರದಲ್ಲೂ ಪೋಷಕರನ್ನು ಶೋಷಣೆ ಮಾಡುತ್ತಿವೆ. ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಜಯಕರ್ನಾಟಕ ಸಂಘ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಕೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಜಯ ಕರ್ನಾಟಕ ತಾಲೂಕು ಘಟಕದ ಅಧ್ಯಕ್ಷ ದಿನೇಶ್ಗೌಡ ಮಾತನಾಡಿ, ಖಾಸಗಿ ಶಾಲೆಯವರು ಪಠ್ಯಪುಸ್ತಕಗಳ ಜತೆಯಲ್ಲಿ ನೋಟ್ ಪುಸ್ತಕಗಳನ್ನು ಶಾಲೆಯಲ್ಲೇ ಖರಿದೀಸಬೇಕೆಂಬ ಕರಾರು ವಿಧಿಸುತ್ತಿದ್ದಾರೆ. ಹೊರಗಡೆ ಮಾರುಕಟ್ಟೆಯಲ್ಲಿ 25ಗೆ ಸಿಗುವ ನೋಟ್ ಪುಸ್ತಕಗಳು ಶಾಲೆಯಲ್ಲಿ 40 ಕೊಟ್ಟು ಖರೀದಿಸಬೇಕಾಗಿದೆ. ಇದೇ ಎಲ್ಲ ಸಾಮಾಗ್ರಿಗಳನ್ನು ಬೆಲೆಯನ್ನು ಹೆಚ್ಚಿಗೆ ಮಾಡಿ ಪೋಷಕರನ್ನು ಸುಲಿಯುತ್ತಿದ್ದಾರೆ. ಇಲ್ಲಿನ ಬಿಇಒ ಕಚೇರಿ ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದೆ ಎಂದು ಅವರು ಆರೋಪಿಸಿದರು. ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಕ್ಷೇತ್ರಶಿಕ್ಷಣಾಧಿಕಾರಿ ಸುಬ್ರಮಣ್ಯ, ಲಿಖಿತ ಮೂಲಕ ದೂರು ಸಲ್ಲಿಸಿದರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈಶ್ವರ್, ಮಂಜುನಾಥ್, ಮಂಗಳಾ ಗೌರಮ್ಮ, ಸಂದೀಪ್, ಸೈಕಲ್ ಬಾಬು ಸೇರಿದಂತೆ ಅನೇಕರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

