ಜಿಲ್ಲಾ ಕೃಷಿ ಇಲಾಖೆಗೆ ಸಿಬ್ಬಂದಿ ಕೊರತೆ
ಕೋಲಾರ: ಜಿಲ್ಲೆಯ ಕೃಷಿ ಇಲಾಖೆಗೆ 202 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 86 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಿಕ್ಕಣ್ಣ ತಿಳಿಸಿದರು.
ಮಂಗಳವಾರ ತಮ್ಮನ್ನು ಭೇಟಿಯಾಗಿದ್ದ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಕೃಷಿ ಸಹಾಯಕರ ಕೊರತೆ ಇರುವುದರಿಂದ ಸರ್ಕಾರದ ವಿವಿಧ ಸವಲತ್ತುಗಳನ್ನು ರೈತರಿಗೆ ತಲುಪಿಸಲು ಕಷ್ಟವಾಗುತ್ತದೆ. ಜೊತೆಗೆ ರೈತರಿಗೆ ಸಂದಿಗ್ಧ ಪರಿಸ್ಥಿತಿಯಲ್ಲಿ ಸೂಕ್ತ ಮಾರ್ಗದರ್ಶನ, ತರಬೇತಿಗೂ ಸಮಸ್ಯೆಯಾಗಿದೆ ಎಂದರು. ಸರ್ಕಾರಕ್ಕೆ ಸಿಬ್ಬಂದಿಯ ಕೊರತೆ ಬಗ್ಗೆ ಸಾಕಷ್ಟು ಬಾರಿ ಪತ್ರ ಮುಖೇನ ಗಮನಕ್ಕೆ ತರಲಾಗಿದೆ. ಈ ಸಮಸ್ಯೆ ಕೇವಲ ಕೋಲಾರ ಜಿಲ್ಲೆಗೆ ಮಾತ್ರವಲ್ಲ. ಇಡೀ ರಾಜ್ಯದಲ್ಲಿ ಕೊರತೆ ಇದ್ದು, ಸರ್ಕಾರ ಇತ್ತೀಚೆಗೆ ಸಿಬ್ಬಂದಿಯ ಕೊರತೆ ನಿವಾರಣೆಗೆ ಗಮನ ಹರಿಸುತ್ತಿದೆ ಎಂದು ಹೇಳಿದರು. ಜಿಲ್ಲೆಯ 27 ರೈತ ಸಂಪರ್ಕ ಕೇಂದ್ರಗಳಿಗೆ ಅಗತ್ಯವಿರುವಷ್ಟು ಸಿಬ್ಬಂದಿ ಒದಗಿಸಿಲ್ಲ. ಜಿಲ್ಲೆಯ ಕೃಷಿ ಇಲಾಖೆಗೆ ಮಂಜೂರಾಗಿರುವ ಹುದ್ದೆಗಳು 202, ಭರ್ತಿ ಆಗಿರುವುದು 86, 103 ಹುದ್ದೆಗಳು ಖಾಲಿ ಇವೆ. ಕೃಷಿ ಇಲಾಖೆಯೊಂದಿಗೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಸಂಬಂಧ ಸರ್ಕಾರದಿಂದ ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಅಭಿಪ್ರಾಯ ಸಂಗ್ರಹಣೆ ಹಾಗೂ ಸಾಧಕ-ಬಾಧಕಗಳ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. ಒಂದು ವೇಳೆ ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆ ಜತೆ ವಿಲೀನಗೊಳಿಸಿದರೆ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಅನುಕೂಲ ಹಾಗೂ ಸಹಕಾರ ಸಿಗುತ್ತದೆ ಎಂದು ಅಭಿಪ್ರಾಯಿಸಿದರು.
ಕೃಷಿ ಇಲಾಖೆಯ ಸಿಬ್ಬಂದಿಯ ಪ್ರಸ್ತುತ ವಿವರ
ಹುದ್ದೆಗಳು ಮಂಜೂರು ಭರ್ತಿ ಖಾಲಿ ಹುದ್ದೆ
ಕೃಷಿ ಅಧಿಕಾರಿಗಳು 44 14 30
ಕೃಷಿ ಅಧಿಕಾರಿ(ರೈ.ಮಿ) 3 1 2
ಆಡಳಿತ ಅಧಿಕಾರಿ 1 0 1
ಅಧೀಕ್ಷಕರು 6 4 2
ಕೃಷಿ ಸಹಾಯಕರು 58 6 52
ಎಸ್ಡಿಸಿ 12 6 6
ಬೆರಳಚ್ಚುಗಾರರು 8 5 3
ವಾಹನ ಚಾಲಕರು 6 5 1
ಡಿ.ಗ್ರೂಪ್ ನೌಕರರು 22 16 6
ಒಟ್ಟು 160 57 103
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

