ಕೋಲಾರ

ಭೂ ಪರಿಹಾರ ಇತ್ಯರ್ಥ: ಡಿಸಿ

Published On :

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 7ರ ಅಗಲೀಕರಣ ಮತ್ತು ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಕೈಗೊಂಡ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ರೈತರು ತಮ್ಮ ಜಮೀನುಗಳನ್ನು ಕಳೆದುಕೊಂಡಿದಕ್ಕೆ ಸಂಬಂಧಪಟ್ಟಂತೆ ಒಟ್ಟು 338 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿ ತಾಲೂಕುಗಳ ವಿವಿಧ ಗ್ರಾಮಗಳ ರೈತರು ಹೆಚ್ಚುವರಿ ಪರಿಹಾರ ಕೋರಿ 362 ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಿಸಿದ್ದರು. ಇದರಲ್ಲಿ ಒಟ್ಟು 328 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಉಳಿದಂತೆ 34 ಪ್ರಕರಣಗಳ ಪೈಕಿ 10 ಪ್ರಕರಣಗಳನ್ನು (ಮೇ 30) ಪರಿಶೀಲಿಸಿ ಇತ್ಯರ್ಥಪಡಿಸಲಾಗಿದೆ. ಉಳಿದ ಪ್ರಕರಣಗಳನ್ನು ಮುಂದಿನ 3-4 ತಿಂಗಳೊಳಗೆ ಕಾನೂನು ನಿಯಮಾನುಸಾರ ಇತ್ಯರ್ಥಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭಿವೃದ್ಧಿ ಚರ್ಚೆ: ಸಭೆ ಇಂದು
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜೂ.4 ರ ಬೆಳಗ್ಗೆ 10 ಗಂಟೆಗೆ ಗೌರಿಬಿದನೂರು ತಾಲೂಕು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ಕಂಬ ಮುರಿದಿದೆ ಎಚ್ಚರ!
ಕೋಲಾರ: ನಗರದ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯ ಬಳಿ ವಿದ್ಯುತ್ ಕಂಬವೊಂದು ಮುರಿದಿದ್ದು ಸಾರ್ವಜನಿಕರು ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದರೂ ಕಂಬ ಬದಲಾವಣೆ ಮಾಡದೆ ನಿರ್ಲಕ್ಷಿಸಲಾಗಿದೆ.
ವಿದ್ಯುತ್ ಕಂಬವಿರುವ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವ ರೋಗಿಗಳು, ನೌಕರರು, ವಾಯು ವಿಹಾರಕ್ಕೆ ಬರುವ ವೃದ್ಧರು ಓಡಾಡುತ್ತಾರೆ. ವಿದ್ಯುತ್ ಕಂಬ ಮುರಿದು ಬಾಗಿದೆ, ಇತ್ತೀಚೆಗೆ ಬಿದ್ದ ಮಳೆಯಿಂದ ಕಂಬಕ್ಕೆ ಅಳವಡಿಸಿರುವ ಕೇಬಲ್‌ಗಳು ಸಹ ಕಳಚಿಕೊಳ್ಳುವಂತಾಗಿರುವುದರಿಂದ ಅಪಾಯ ಎದುರಾಗಿದೆ.
ಜನರ ಪ್ರಾಣ ಹೋಗುವ ಮುಂಚೆ ಬೆಸ್ಕಾಂ ಅಧಿಕಾರಿಗಳು ಮುರಿದು ಬಿದ್ದಿರುವ ವಿದ್ಯುತ್ ಕಂಬವನ್ನು ತೆರವು ಮಾಡಿ ಹೊಸ ಕಂಬವನ್ನು ನೆಡಬೇಕೆಂಬುದು ಜನತೆಯ ಒತ್ತಾಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.