ಮುಂಡೆ ನಿಧನಕ್ಕೆ ಸಂತಾಪ
ಬಂಗಾರಪೇಟೆ: ಕೇಂದ್ರ ಪಂಚಾಯಿತಿ ರಾಜ್ಯ ಸಚಿವ ಗೋಪಿನಾಥ್ ಮುಂಡೆ ಅವರ ಅಕಾಲಿಕ ನಿಧನಕ್ಕೆ ಪಟ್ಟಣದ ಬಿಜೆಪಿ ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಕುವೆಂಪು ವೃತ್ತದಲ್ಲಿ ಗೋಪಿನಾಥ್ ಮುಂಡೆ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿದ ಬಿಜೆಪಿ ನಗರ ಘಟಕದ ಅಧ್ಯಕ್ಷ ರಮೇಶ್, ಗೋಪಿನಾಥ್ ಮುಂಡೆ ಅವರು ಪ್ರಭಾವಿ ಶಾಲಿ ರಾಜಕಾರಣಿ. ಐದು ಬಾರಿ ಶಾಸಕರಾಗಿ, ಮಂತ್ರಿ ಹಾಗೂ ಉಪಮುಖ್ಯಮಂತ್ರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿದರು. ಪುರಸಭೆ ಸದಸ್ಯ ಬಿ.ಸಿ.ಶ್ರೀನಿವಾಸಮೂರ್ತಿ ಮಾತನಾಡಿದರು. ಈ ವೇಳೆ ಪಟ್ಟಣ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ನಾರಾಯಣಸ್ವಾಮಿ, ರಾಜಶೇಖರ್, ಶಾಂತಿನಗರ ಮಂಜುನಾಥ್, ಕುಮಾರ್, ತಾಪಂ ಸದಸ್ಯ ಹನುಮಪ್ಪ, ಕಲಾವಿದ ಶ್ರೀನಿವಾಸ್, ಸುಗೇಂದ್ರನ್, ಶಶಿಕುಮಾರ್ ಮತ್ತಿತರರು ಇದ್ದರು.
ಕೆಜಿಎಫ್ನಲ್ಲಿ ಶ್ರದ್ಧಾಂಜಲಿ
ಕೆಜಿಎಫ್: ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ನಿಧನಕ್ಕೆ ಕೆಜಿಎಫ್ ಬಿಜೆಪಿ ಘಟಕದ ಅಧ್ಯಕ್ಷ ಸುರೇಶ್ನಾರಾಯಣ್, ಶಾಸಕಿ ವೈ.ರಾಮಕ್ಕ, ಮಾಜಿ ಶಾಸಕ ವೈ.ಸಂಪಂಗಿ ಸೇರಿದಂತೆ ಪಕ್ಷದ ಇತರೆ ಮುಖಂಡರು ಹಾಗೂ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ. ಈ ವೇಳೆ ಮಾತನಾಡಿದ ಅಧ್ಯಕ್ಷ ಸುರೇಶ್ನಾರಾಯಣ್, ಗೋಪಿನಾಥ್ ಮುಂಡೆ ಅವರು ಪಕ್ಷದ ಉತ್ತಮ ನಾಯಕತ್ವ ಗುಣಗಳನ್ನು ಹೊಂದಿದ್ದು, ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದರು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಿಕ್ಕೆ ಬರಲು ಇಂತಹ ನಾಯಕರ ಕೊಡುಗೆ ಅಪಾರ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

