ರೇಷ್ಮೆ ಇಲಾಖೆ ವಿಲೀನ: ಸರ್ಕಾರ ನಿರ್ಧಾರ ಮರುಪರಿಶೀಲಿಸಲಿ
ಮಾಲೂರು: ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆ ಜತೆ ವಿಲೀನಗೊಳಿಸುವ ತನ್ನ ನಿರ್ಧಾರವನ್ನು ರಾಜ್ಯ ಸರ್ಕಾರ ಮರುಪರಿಶೀಲಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಕೆ.ವೈ.ನಂಜೇಗೌಡ ಒತ್ತಾಯಿಸಿದರು.
ಇಲ್ಲಿನ ಕೃಷಿಕ ಸಮಾಜದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಿವೃತ್ತಗೂಂಡ ತಾಲೂಕು ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ರುದ್ರಪ್ಪ ಅವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರೈತರ ಹಿತಕ್ಕಾಗಿ ಎರಡೂ ಇಲಾಖೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಿದರೆ ಚೆನ್ನ. ರೇಷ್ಮೆ ಬೆಳೆ ಬೆಳೆಯಲು ರೈತರಿಗೆ ಉತ್ತಮ ಸ್ವಂದನೆ ಸಿಗುತ್ತಿಲ್ಲ. ಇನ್ನು ಕೃಷಿ ಇಲಾಖೆಯೂಡನೆ ರೇಷ್ಮೆ ಇಲಾಖೆಯನ್ನು ಸೇರ್ಪಡೆಗೊಳಿಸಿದರೆ ರೇಷ್ಮೆ ಬೆಳೆ ಅಭಿವೃದ್ಧಿ ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇಲಾಖೆ ವಿಲೀನಗೊಳಿಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ಜಿಲ್ಲೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಅಧಿಕಾರಿ ರುದ್ರಪ್ಪ ಅವರು, 35 ವರ್ಷಗಳ ನನ್ನ ಸರ್ಕಾರಿ ಸೇವೆಯಲ್ಲಿ 25 ವರ್ಷ ಕೋಲಾರ ಜಿಲ್ಲೆಯಲ್ಲೇ ಕಳೆದಿದ್ದು, ಮಾಲೂರು ತಾಲೂಕಿನಲ್ಲಿ ನಿರ್ವಹಿಸಿದ್ದ ಸೇವೆಯು ಸಂತೃಪ್ತಿ ತಂದಿದೆ ಎಂದರು. ಇದೇ ವೇಳೆ, ಸರ್ಕಾರಿ ಸೇವೆಯಿಂದ ನಿವೃತ್ತರಾದ ಟೇಕಲ್ನ ರೇಷ್ಮೆ ನಿರೀಕ್ಷಕ ಖಾದಿರ್ ಅವರನ್ನೂ ಸನ್ಮಾನಿಸಲಾಯಿತು. ಪಿ.ನಾರಾಯಣಸ್ವಾಮಿ, ಮಂಜುನಾಥ್, ಈಶ್ವರ್ ಗೌಡ, ನಾಗಪ್ಪ, ಈರಣ್ಣ, ದೊಡ್ಡಿ ರಾಜಣ್ಣ, ಕೆಂಚೇಗೌಡ, ಸೋಮಣ್ಣ, ಗೋವಿಂದೇಗೌಡ, ಸಂಪಂಗಿ ಸೇರಿದಂತೆ ನೂರಾರು ರೇಷ್ಮೆ ಬೆಳೆಗಾರರು ಕಾರ್ಯಕ್ರಮದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

