ರೇಷ್ಮೆ ಗೂಡಿನ ಬಾಕ್ಸ್ ನೀಡಲು ರೈತ ಸಂಘದ ಆಗ್ರಹ
ಶಿಡ್ಲಘಟ್ಟ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ರೇಷ್ಮೆ ಗೂಡಿನ ಮಾರುಕಟ್ಟೆಗೆ ಗೂಡುಗಳನ್ನು ತುಂಬಲು ಬಾಕ್ಸ್‌ಗಳನ್ನು ಕೂಡಲೇ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ರೈತ ಸಂಘದ ಪದಾಧಿಕಾರಿಗಳು ರೇಷ್ಮೆ ಅಭಿವೃದ್ಧಿ ಮಂಡಳಿಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದ ರೇಷ್ಮೆ ಗೂಡಿನ ಮಾರುಕಟ್ಟೆ ಉಪನಿರ್ದೇಶಕರ ಮೂಲಕ ಮನವಿಯನ್ನು ಸಲ್ಲಿಸಿದ ಅವರು ಕಳೆದ ಒಂದೂವರೆ ವರ್ಷದಿಂದ ಈ ಬಗ್ಗೆ ಮನವಿಗಳನ್ನು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಾಕ್ಸ್‌ಗಳಿಗಾಗಿ ಜಗಳವಾಡಿಕೊಂಡು ಆಸ್ಪತ್ರೆ ಹಾಗೂ ಪೋಲಿಸ್ ಠಾಣೆಯ ಮೆಟ್ಟಿಲು ಏರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಗಮನಹರಿಸಿಲ್ಲ. ಜೂನ್ 10ರೊಳಗೆ ಬಾಕ್ಸ್ ಪೂರೈಸದಿದ್ದರೆ ಮಾರುಕಟ್ಟೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ತಾಲೂಕು ರೈತ ಸಂಘದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಉಪಾಧ್ಯಕ್ಷ ಮುನಿನಂಜಪ್ಪ, ಎಂ.ದೇವರಾಜು, ಟಿ.ಆರ್.ದೇವರಾಜು, ಎನ್.ಎಸ್.ಶ್ರೀನಿವಾಸ್, ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

