ಕೋಲಾರ

ಕಟ್ಟಡ ಕಾರ್ಮಿಕರ ಪ್ರತಿಭಟನೆ ಮುಂದುವರಿಕೆ

Published On :

ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆಸಿದೆ.
ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ವಿಜಯಕುಮಾರ್, ಜಯಶಂಕರ್ ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಒಂದು ವಾರದಲ್ಲಿ ಬೇಡಿಕೆಗಳನ್ನು ಈಡೇರಿಸಲಿದ್ದು ಧರಣಿ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರಾದರೂ ಕಾರ್ಮಿಕ ಮುಖಂಡರು ಒಪ್ಪದ ಹಿನ್ನೆಲೆಯಲ್ಲಿ ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಸ್ಥಳದಿಂದ ನಿರ್ಗಮಿಸಿದರು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ನಿವಾರಿಸುವುದಾಗಿ ಹೇಳುವ ತನಕ ಪ್ರತಿಭಟನೆ ಮುಂದುವರೆಸುವುದಾಗಿ ಮುಖಂಡರು ತಿಳಿಸಿದ್ದಾರೆ.
ಸಿಐಟಿಯು ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ, ಖಜಾಂಚಿ ಆನಂದ್ ಮುಖಂಡರಾದ ಕೃಷ್ಣಪ್ಪ,ನಾಗರಾಜ್, ಶ್ರೀನಿವಾಸ್, ಭೀಮರಾಜ್ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.