ಕೋಲಾರ

ನೀರು ಪೂರೈಕೆಗೆ ಸಿಪಿಎಂ ಆಗ್ರಹ

Published On :

ಬಾಗೇಪಲ್ಲಿ: ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸಿ ಸಿಪಿಎಂ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಮುಂದೆ ಪತ್ರಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸಿಪಿಎಂ ಮುಖಂಡ ಮಂಜುನಾಥರೆಡ್ಡಿ, ನೀರು ಪೂರೈಕೆಯಲ್ಲಿ ಜಿಲ್ಲಾ, ತಾಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿವೆ. ಜನಪ್ರತಿನಿಧಿಗಳು ಕೂಡಾ ಇತ್ತ ಗಮನಹರಿಸುತ್ತಿಲ್ಲ ಎಂದು ಅವರು ಆರೋಪಿಸಿದರು. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ 2 ಕಿ.ಮೀ ದೂರದಿಂದ ಕುಡಿಯುವ ನೀರನ್ನು ತರಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಬರಗಾಲವಿದ್ದರೂ ನೀತಿ ಸಂಹಿತೆ ನೆಪ ಹೇಳಿ ಅಧಿಕಾರಿಗಳು ತಪ್ಪಿಸಿಕೊಳ್ಳುತ್ತಿದ್ದರು. ಚುನಾವಣೆ ಮುಗಿದಿದ್ದರೂ ಇನ್ನೂ ಅದೇ ರಾಗ ಅದೇ ಹಾಡು ಎನ್ನುವಂತೆ ಈಗಲೂ ಅದೇ ರೀತಿ ನಡೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಮುಖಂಡ ರಘುರಾಮರೆಡ್ಡಿ ಮಾತನಾಡಿದರು. ಪ್ರಭಾರಿ ತಹಸೀಲ್ದಾರ್ ಆರ್. ರಾಜೇಂದ್ರ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಜಿ.ಪಂ ಸದಸ್ಯೆ ನಾರಾಯಣಮ್ಮ, ತಾಪಂ ಉಪಾಧ್ಯಕ್ಷ ಶಂಕರರೆಡ್ಡಿ, ಸದಸ್ಯರಾದ ಗೋಪಾಲಕೃಷ್ಣ, ನಾರಾಯಣ ನಾಯಕ್, ಮುಖಂಡರಾದ ಚನ್ನರಾಯಪ್ಪ, ರಾಮಲಿಂಗಪ್ಪ, ಚಂದ್ರಶೇಖರರೆಡ್ಡಿ, ಪುರಸಭಾ ಸದಸ್ಯ ಮಾಜಿ ಕೃಷ್ಣಪ್ಪ, ಹೇಮಚಂದ್ರ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.