ಕೋಲಾರ

ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರ ಜತೆ ಮಾತುಕತೆ

Published On :

ಚಿಕ್ಕಬಳ್ಳಾಪುರ: ರೇಷ್ಮೆ ಬೆಳೆಗಾರರ ನಿಯೋಗವು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ, ಕೃಷಿ ಇಲಾಖೆಯೊಂದಿಗೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿತು.
ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಮಂಡ್ಯ, ಹಾಸನ ಮತ್ತು ಇತರೆ ಜಿಲ್ಲೆಗಳಿಂದ ನೂರಕ್ಕೂ ಹೆಚ್ಚು ರೈತ ಪ್ರತಿನಿಧಿಗಳು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಸತೀಶ್  ಅವರನ್ನು ಭೇಟಿ ಮಾಡಿ, ರೇಷ್ಮೆ ಇಲಾಖೆಯ ಸಂಯೋಜನೆಯಿಂದಾಗುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.
ಅಲ್ಲದೇ ಈ ರೈತ ವಿರೋಧಿ ನೀತಿಯನ್ನು ಕೈ ಬಿಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರಿನ ರೇಷ್ಮೆ ಕೃಷಿ ಪ್ರಧಾನ ಕಚೇರಿಯ ಮುಂದೆ ಬೃಹತ್ ಚಳವಳಿಯನ್ನು ಕೈಗೊಳ್ಳಬೇಕಾಗುತ್ತದೆ ಎಂತಲೂ ಎಚ್ಚರಿಕೆ ನೀಡಿದರು.  ಇಲಾಖೆಯ ಸಂಯೋಜನೆಗಾಗಿ ಮೇ 17ರಂದು ಸರ್ಕಾರ ಆದೇಶವನ್ನು ಹೊರಡಿಸಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ 8 ಜನರ ಸಮಿತಿಯನ್ನು ನೇಮಕ ಮಾಡಿರುವುದು ರೇಷ್ಮೆ ಕೃಷಿ ರೈತರಲ್ಲಿ ಆತಂಕವನ್ನುಂಟು ಮಾಡಿದೆ. ಹೀಗೆ ಮಾಡಿದರೆ ರೇಷ್ಮೆ ಕೃಷಿ ಕಣ್ಮರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರ ನಿಯೋಗ ಮನವಿ ಸ್ವೀಕರಿಸಿ ಮಾತನಾಡಿದ ಆಯುಕ್ತ ಸತೀಶ್, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ರೈತ ಮುಖಂಡರಾದ ಯಲುವಹಳ್ಳಿ ಸೊಣ್ಣೇಗೌಡ, ಮಳ್ಳೂರು ಹರೀಶ್, ನಾರಾಯಣಸ್ವಾಮಿ, ಭೈರೇಗೌಡ ಸೇರಿದಂತೆ ಮುಂತಾದವರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.