ಕೋಲಾರ

'ಶಿಕ್ಷಣದ ಮೂಲಕ ಅನಕ್ಷರತೆ ದೂರ ಮಾಡಿ'

Published On :

ಮಾಲೂರು: ಪ್ರತಿಯೊಬ್ಬರು ಶಿಕ್ಷಣ ಪಡೆಯುವ ಮೂಲಕ ದೇಶದ ಅಭಿವೃದ್ಧಿಗೆ ಸಮಸ್ಯೆಯಾಗಿರುವ ಅನಕ್ಷರತೆ ದೂರ ಮಾಡಬೇಕೆಂದು ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ. ಪುಟ್ಟಸ್ವಾಮಿ ಹೇಳಿದರು.
ಅವರು ತಾಲೂಕಿನ ಲಕ್ಕೂರು ಗ್ರಾಮ ಪಂಚಾಯ್ತಿಯ ಲೋಕಶಿಕ್ಷಣ ಕೇಂದ್ರದಲ್ಲಿ ಸ್ವಯಂ ಸೇವಕರಿಗೆ ನಡೆದ 2 ನೇ ಹಂತದ 4 ದಿನಗಳ ತರಬೇತಿ ಕಾರ್ಯಾಗಾರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡುತ್ತ ದೇಶದ ಅಭಿವೃದ್ಧಿ ಶೈಕ್ಷಣಿಕ ಮಟ್ಟದ ಮೇಲೆ ಅವಲಂಬಿತವಾಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ದೇಶದಲ್ಲಿ ಇನ್ನೂ ಉಳಿದಿರುವ ಅನಕ್ಷರಸ್ಥರಿಗಾಗಿ ನಾನಾ ಯೋಜನೆಗಳನ್ನು ಜಾರಿಗೆ ತಂದಿದೆ.ಗ್ರಾಮ-ಹೋಬಳಿ ಮಟ್ಜದಲ್ಲಿ ಜಾಗೃತಿ ಸಭೆಗಳನ್ನು ಹಮ್ಮಿಕೊಂಡು ಅನಕ್ಷರತೆ ಹೋಗಲಾಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಪಂಚಾಯ್ತಿ ಅಧ್ಯಕ್ಷ ಕೆ. ನಾರಾಯಣಸ್ವಾಮಿ ಮಾತನಾಡಿ ರಾಜ್ಯ ಸರ್ಕಾರ ಅನಕ್ಷರಸ್ಥರನ್ನು ಅಕ್ಷರಸ್ಥರಾಗಿ ಮಾಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಬಹಳಷ್ಟು ಗ್ರಾಮಗಳಲ್ಲಿ ಇನ್ನೂ ಅನಕ್ಷರಸ್ಥರ ಸಂಖ್ಯೆ ಸಾಕಷ್ಟಿದೆ. ಅವರನ್ನು ಗುರ್ತಿಸಿ ಅಕ್ಷರಸ್ಥರನ್ನಾಗಿ ಮಾಡಿ ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡಲಾಗುವುದು ಎಂದರು.ತರಬೇತಿ ಶಿಬಿರದಲ್ಲಿ ಕೇವಲ ಓದು ಬರಹವಲ್ಲದೇ ಶೌಚಾಲಯದ ಅವಶ್ಯಕತೆ, ಪರಿಸರ-ಶುಚಿತ್ವ ಹಾಗೂ ಸರ್ಕಾರದಿಂದ ಅನುಷ್ಠಾನಗೊಂಡಿರುವ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ 40 ಶಿಬಿರಾರ್ಥಿಗಳಿಗೆ ಅಕ್ಷರ ಕಲಿಸುವ ಪರಿಕರಗಳನ್ನು ವಿತರಿಸಲಾಯಿತು. ಸಮಿತಿಯ ಉಪಾಧ್ಯಕ್ಷ ಟಿ. ಕೃಷ್ಣಾರೆಡ್ಡಿ, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಡಿ.ಪಿ. ವೆಂಕಟೇಶನ್, ಸಮಿತಿ ಸದಸ್ಯ ಎಲ್.ವಿ. ರಾಜೇಶ್, ಪ್ರೇರಕರಾದ ಲಕ್ಕೂರು ಶ್ರೀನಿವಾಸ್, ಪುಷ್ಪ ಇದ್ದರು.

ಸ್ವಚ್ಛ ಊರು- ನಮ್ಮ ಹುಳಿಯಾರು ಇಂದು
ಹುಳಿಯಾರು: ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ  ವಾಸವಿ ವಿದ್ಯಾಸಂಸ್ಥೆ, ಕನಕದಾಸ ಪದವಿಪೂರ್ವ ಕಾಲೇಜು, ಯೋಗಿನಾರಾಯಣ ಕೈಗಾರಿಕಾ ತರಬೇತಿ ಕೇಂದ್ರ ಹಾಗೂ ರೋಟರಿ ಸಂಸ್ಥೆ ಸಹಯೋಗದೊಂದಿಗೆ ಪರಿಸರ ಸಂರಕ್ಷಣಾ ಅಭಿಯಾನದ ಅಂಗವಾಗಿ ಗುರುವಾರ ಬೆಳಿಗ್ಗೆ 10ಕ್ಕೆ ವಾಸವಿ ಶಾಲೆಯಲ್ಲಿ ಸ್ವಚ್ಛ ಊರು ನಮ್ಮ ಹುಳಿಯಾರು ಕಾರ್ಯಕ್ರಮ ನಡೆಯಲಿದೆ. ಹುಳಿಯಾರು ರೋಟರಿ ಸಂಸ್ಥೆ ಅಧ್ಯಕ್ಷ ಗಂಗಾಧರರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ತಾ.ಪಂ. ಅಧ್ಯಕ್ಷ ಕೆಂಕೆರೆ ನವೀನ್ ಜಾಥಾಕ್ಕೆ ಚಾಲನೆ ನೀಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.