ಅಡುಗೆ ಸಿಬ್ಬಂದಿ ಮಧ್ಯೆ ಗಲಾಟೆ
ಸಹಾಯಕಿ ಫಾಮೀದಾ ಹಾಗೂ ಮುಖ್ಯ ಅಡುಗೆ ಸಹಾಯಕಿ ಹಸೀನಾ ಮಧ್ಯೆ ಕ್ಷುಲ್ಲಕ ಕಾರಣದಿಂದ ಜಗಳವಾಗಿದ್ದು, ಎರಡೂ ಕಡೆಯವರಿಂದ ಗಲಾಟೆ ನಡೆದಿದೆ. ಇವರಿಬ್ಬರ ಬೀದಿ ರಂಪಾಟದಿಂದ ಬೇಸತ್ತ ಪೋಷಕರು ತಮ್ಮ ಮಕ್ಕಳನ್ನು ಶಾಲೆಯಿಂದ ವಾಪಸ್ ಮನೆಗೆ ಕರೆದುಕೊಂಡು ಹೋದರು. ಇವರಿಬ್ಬರಿಂದ ಶಾಲೆಯಲ್ಲಿ ದಿನಾಲೂ ಗಲಾಟೆಯಾಗುತ್ತಿದ್ದರೂ ಅಧಿಕಾರಿಗಳು ಮೌನವಾಗಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರೊ. ಬಿ.ಕೃಷ್ಣಪ್ಪ ಜನ್ಮ ದಿನಾಚರಣೆಗೆ ನಿರ್ಧಾರ
ಕೋಲಾರ: ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿ ಸ್ಥಾಪನೆಯಾಗಿ 40 ವರ್ಷವಾಗಿದೆ. ಜೂ.9ರಂದು ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಹುಟ್ಟು ಹಬ್ಬವನ್ನು ನಗರದ ಪತ್ರಕರ್ತರ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಬಿ.ವಿ. ಚಲಪತಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ದಲಿತರು ಸ್ವಾಭಿಮಾನಿಗಳಾಗಿ ಬದುಕಲು ಹೋರಾಟಗಳ ಮೂಲಕ ಅವಕಾಶ ಕಲ್ಪಿಸಿದ ಕೃಷ್ಣಪ್ಪ ಅವರ ಆಶಯಗಳನ್ನು ಈಡೇರಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಈ ವೇಳೆ, ಜಿಲ್ಲಾ ಸಂಚಾಲಕರಾದ ಸೂಲಿಕುಂಟೆ ರಮೇಶ್, ಮುಖಂಡ ನಾಗನಾಳ ಮುನಿಯಪ್ಪ, ಪುರಹಳ್ಳಿ ಯಲ್ಲಪ್ಪ, ಮದನಹಳ್ಳಿ ವೆಂಕಟೇಶ್, ಕೇಶವ, ರೆಡ್ಡಪ್ಪ ಜಿಲ್ಲಾ ಸಮಿತಿ ಸದಸ್ಯ ಗೋವಿಂದರಾಜು ಇದ್ದರು.
ತಂಬಾಕು ನಿಷೇಧ ಕುರಿತು ಅರಿವು ಜಾಥಾ
ಕೆಜಿಎಫ್: ಧೂಮಪಾನದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದ್ದು, ಯುವಕರು ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಲಕ್ಷ್ಮೀನಾರಾಯಣ ತಿಳಿಸಿದರು. ಕೋಟ್ಪಾ ಕಾಯ್ದೆಯಡಿ ತಂಬಾಕು ನಿಷೇಧದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನು ಬಾಹಿರ. ಅಂತಹವರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಬರ್ಟ್ಸನ್ ಪೇಟೆ ಪೊಲೀಸ್ ಠಾಣೆಯಿಂದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಗೃಹ ರಕ್ಷಕ ದಳ ಜಾಥಾದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

