ಕೋಲಾರ

ಡಾ.ಮಾಸ್ತಿ ಜನ್ಮ ದಿನಾಚರಣೆ ಇಂದು

Published On :

ಕೋಲಾರ: ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ 123ನೇ ಜನ್ಮ ದಿನಾಚರಣೆ ಅಂಗವಾಗಿ ಡಾ. ಮಾಸ್ತಿ ನಮನ, ಕವಿ ಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜೂ.6ರಂದು ಶುಕ್ರವಾರ ಮಾಸ್ತಿಯಲ್ಲಿನ ಡಾ.ಮಾಸ್ತಿ ಸಾಹಿತ್ಯ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕರಾದ ಕೆ.ಎಸ್.ಮಂಜುನಾಥಗೌಡ ಡಾ.ಮಾಸ್ತಿ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಕಾರ್ಯಕ್ರಮವನ್ನು ಸಂಸದ ಕೆ.ಹೆಚ್. ಮುನಿಯಪ್ಪ ಉದ್ಘಾಟಿಸುವರು. ಜಿ.ಪಂ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿದ್ದು ಡಾ.ಮಾಸ್ತಿ ಟ್ರಸ್ಟ್ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ಅಧ್ಯಕ್ಷತೆ ವಹಿಸುವರು.  ಬೆಂಗಳೂರಿನ ಖ್ಯಾತ ಸಾಹಿತಿ ಡಾ. ಕೆ. ಸತ್ಯನಾರಾಯಣ ಡಾ. ಮಾಸ್ತಿ ಬಗ್ಗೆ ವಿಶೇಷ ಉಪನ್ಯಾಸ ನೀಡುವರು. ಕವಿಗೋಷ್ಠಿಯಲ್ಲಿ ಖ್ಯಾತ ಸಾಹಿತಿಗಳಾದ ಲಕ್ಷ್ಮೀಪತಿ ಕೋಲಾರ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜೆ.ಜಿ. ನಾಗರಾಜ್ ಭಾಗವಹಿಸುವರು. ಪ್ರೊ ಟಿ.ಯಲ್ಲಪ್ಪ ಬೆಂಗಳೂರು, ಡಾ. ಚಂದ್ರಶೇಖರ್ ನಂಗಲಿ,  ವಿಜಯರಾಘವನ್, ಸ. ರಘುನಾಥ್, ಪಣಸಮಾಕನಹಳ್ಳಿ ಚೌಡರೆಡ್ಡಿ, ದೊಡ್ಡ ಕಲ್ಲಹಳ್ಳಿ ನಾರಾಯಣಪ್ಪ,  ಕೆ.ಆರ್. ಕೃಷ್ಣಪ್ಪ, ಲಕ್ಕೂರು ಸಿ. ಆನಂದ್, ವೆಂಕಟಾಪುಸತ್ಯಂ, ವೇಣುಗೋಪಾಲವಹ್ನಿ,  ಕೋಗಿಲಹಳ್ಳಿ ಕೃಷ್ಣಪ್ಪ,  ಡಾ. ಶಿವಪ್ಪ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.



ಡಾ.ಕೆ.ಎನ್.ಕವನ ಅಧಿಕಾರ ಸ್ವೀಕಾರ
ಕೋಲಾರ: ಜಿಲ್ಲಾ ವಾರ್ತಾಧಿಕಾರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ಕೆ.ಎನ್. ಕವನ ಅಧಿಕಾರ ಸ್ವೀಕರಿಸಿದ್ದಾರೆ. ಹಿರಿಯ ಸಹಾಯಕ ನಿರ್ದೇಶಕರಾದ ಸಿ.ಎಂ. ರಂಗಾರೆಡ್ಡಿಯವರು ಮೂರು ತಿಂಗಳ ಕಾಲ ಅನಾರೋಗ್ಯದ ಕಾರಣ ರಜೆ ಮೇಲೆ ತೆರಳಿರುವುದರಿಂದ ಡಾ. ಕೆ.ಎನ್. ಕವನ ರವರಿಗೆ ಪ್ರಭಾರ ವಹಿಸಲಾಗಿದೆ.

ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೋಲಾರ: ಕೇಂದ್ರ ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವ ವ್ಯಕ್ತಿಗಳನ್ನು ಗುರುತಿಸಿ ರಾಜೀವ್‌ಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿ ಗೌರವಿಸುತ್ತದೆ. ಈ ಪ್ರಶಸ್ತಿಯನ್ನು ಪ್ರತಿ ವರ್ಷ ದಿವಂಗತ ರಾಜೀವ್ ಗಾಂಧಿಯವರ ಜನ್ಮ ದಿನದಂದು ಘೋಷಿಸಿ ಪ್ರದಾನ ಮಾಡಲಾಗುವುದು. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿ 1ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಗಾಗಿ ಆಯ್ಕೆ ಮಾಡುವ 3 ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯವನ್ನು ನಿರ್ವಹಿಸಿರಬೇಕು. ಸಂಘ-ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರುವುದಿಲ್ಲ.  ಈ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ-ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತ. ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಪ್ರಶಸ್ತಿಗಳಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಅರ್ಜಿಯನ್ನು  ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಜೂ.11ರೊಳಗೆ ಸಲ್ಲಿಸಬೇಕು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.