'ಪರಿಸರ ನಿರ್ಮಾಣಕ್ಕೆ ಮುಂದಾಗಿ'
ಕೆಜಿಎಫ್: ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯ ಮುಂದೆ ಗಿಡ ಮರಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೆಜಿಎಫ್ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಮಮದಾಪುರ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 'ದೇಶದಲ್ಲಿ ಪರಿಸರ ಹಾಳಾಗಲು ಮತ್ತು ನಾಶವಾಗಲು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ವರ್ಷಗಳಿಂದ ಬೆಳೆದು ಬಂದ ಮರಗಳನ್ನು ಕೆಡವಿ ಹಾಕುತ್ತಿರುವುದು ಒಂದು ಕಾರಣವಾಗಿದೆ ಇದರಿಂದ ಉತ್ತಮ ಪರಿಸರಕ್ಕೆ ದಕ್ಕೆ ಉಂಟಾಗುತ್ತಿದೆ. ಪರಿಸರ ಮಾಲಿನ್ಯದಿಂದಾಗಿ ಶುದ್ಧವಾದ ಗಾಳಿಯೂ ಮನುಷ್ಯರೂ ಸೇರಿದಂತೆ ಪ್ರಾಣಿಗಳಿಗೆ ಸಿಗುತ್ತಿಲ್ಲ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರು ಪರಿಸರವನ್ನು ಸಂರಕ್ಷಿಸಲು ತಮ್ಮ ಮನೆ, ತೋಟಗಳಲ್ಲಿ ಮರ ಗಿಡಗಳನ್ನು ಬೆಳೆಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಇದಕ್ಕೂ ಮೊದಲ ನ್ಯಾಯಾಲಯದ ಆವರಣದಲ್ಲಿ ಹೊಂಗೆ, ಬೇವು, ನೇರಳೆ ಮುಂತಾದ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಸುಬ್ರಮಣ್ಯ, ಎಸ್.ಜೆ.ಕೃಷ್ಣ, ಆರ್.ಪಿ.ನಂದೀಶ್, ವಕೀಲರ ಸಂಘದ ಅಧ್ಯಕ್ಷ ಎಸ್.ಎ.ಹರಿನಾಥ್, ಕಾರ್ಯದರ್ಶಿ ಮಣಿವಣ್ಣನ್, ಎಸ್.ಎನ್.ರಾಜಗೋಪಾಲಗೌಡ, ರಾಘವನ್, ಮನೋಹರನ್, ಗೋಪಿನಾಥ್, ಕಲೈಸೆಲ್ವಿ ಸೇರಿದಂತೆ ಇತರೆ ವಕೀಲರು ಹಾಗೂ ಸಿಬ್ಬಂದಿ ಹಾಜರಿದ್ದರು.
ಗಿಡ ನೆಟ್ಟು ಪರಿಸರ ದಿನಾಚರಣೆ
ಬಾಗೇಪಲ್ಲಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಗಿಡವನ್ನು ನೆಟ್ಟು ನೀರು ಹಾಕುವುದರ ಮೂಲಕ ಸಿಪಿಐ ಸಿ.ವಸಂತ್ ಅವರು ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಈ ಭಾಗದಲ್ಲಿ ಮರಗಳನ್ನು ಹೆಚ್ಚಿಗೆ ಕಡಿಯುತ್ತಿರುವುದೇ ಮಳೆಯ ಅಭಾವಕ್ಕೆ ಪ್ರಮುಖ ಕಾರಣ ಎಂದು ಅಭಿಪ್ರಾಯಪಟ್ಟರು. ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಶ್ರೀನಿವಾಸ್, ಡಾ.ಹನುಮಂತರಾಯ, ಕರವೇ ಚಂದ್ರಶೇಖರ್, ಜಯಚಂದ್ರರೆಡ್ಡಿ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

