ಕೋಲಾರ

ಮನುಷ್ಯನ ಸ್ವಾರ್ಥಕ್ಕೆ ಪರಿಸರ ನಾಶ

Published On :

ಚಿಂತಾಮಣಿ: ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಗಿಡಮರ ನಾಶಪಡಿಸಿದ ಪರಿಣಾಮ ಬರ ಪರಿಸ್ಥಿತಿ ಎದುರಿಸುವಂತಾಗಿದೆ  ಎಂದು ಜೆಎಂಎಫ್‌ಸಿ ಹಿರಿಯ ನ್ಯಾಯಾಧೀಶ ಶೀಲಾ ಕಳವಳ ವ್ಯಕ್ತಪಡಿಸಿದರು. ನಗರದ ವಾಲ್ಮೀಕಿ ವೃತ್ತದ ಬಳಿ ಇರುವ ನ್ಯಾಯಾಧೀಶರ ವಸತಿ ಗೃಹಗಳ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರ ಉಳಿವಿಗಾಗಿ ನಮ್ಮೆಲ್ಲರ ಜವಾಬ್ದಾರಿ. ಮನೆ ಮುಂಭಾಗದಲ್ಲಿ ಅಥವಾ ಸುತ್ತಮುತ್ತಲೂ ಹಾಗೂ ರಸ್ತೆ ಬದಿಯಲ್ಲಿ ಗಿಡ ಮರ ಬೆಳೆಸಿ, ಉಳಿಸಿದರೆ ಮಾತ್ರ ಬದಕುಲು ಸಾಧ್ಯ ಎಂದು ಹೇಳಿದರು.
ಮಾನವ ತನ್ನ ಅತಿ ಆಸೆಯಿಂದ ಕಾಡನ್ನು ನಾಶಪಡಿಸಿ, ಪ್ರಾಣಿ ಪಕ್ಷಿಗಳಿಗೆ ಆಹಾರವಿಲ್ಲದಂತೆ ಮಾಡಿದ್ದಾನೆ ಎಂದು ಅವರು ಅಭಿಪ್ರಾಯಪಟ್ಟರು. ನಂತರ ಸರ್ಕಾರಿ ನೌಕರರ ತಾಲ್ಲೂಕು ಅಧ್ಯಕ್ಷ ಬಿ.ಜನಾರ್ದನ ರೆಡ್ಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ  ನಗರಸಭೆ ಆಯುಕ್ತ ಚನ್ನೇಗೌಡ, ಆರೋಗ್ಯ ಅಧಿಕಾರಿಗಳಾದ ಸಿ.ಕೆ.ಬಾಬು, ಪ್ರದೀಪ್, ಮಂಜುನಾಥ್, ಪರಿಸರ ಅಭಿಯಂತರ ಗೌತಮ್, ಅಶೋಕ್, ಹರಿಪ್ರಸಾದ್, ಕುಂಟಿಗಡ್ಡೆ ಲಕ್ಷ್ಮಣ್ ಹಾಗೂ ವೆಂಕಟೇಶ್ ಪ್ರಸಾದ್,ನರಸಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.