ಕೋಲಾರ

ಬಿಸಿಎಂ ಹಾಸ್ಟೆಲ್‌ಗಳಿಗೆ ಜಿಪಂ ಸಿಇಒ ಭೇಟಿ

Published On :

ಮಾಲೂರು: ಕೋಲಾರ ಜಿಪಂ ಸಿಇಒ ವಿನೋದ್ ಪ್ರಿಯಾ ಅವರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಬಿಸಿಎಂ ಹಾಸ್ಟೆಲ್‌ಗಳಿಗೆ ಗುರುವಾರ ಭೇಟಿ ನೀಡಿ ಮೂಲ ಸೌಕರ್ಯಗಳನ್ನು ವೀಕ್ಷಿಸಿದರು. ಸ್ಥಳೀಯ ತಾಪಂ ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ ಜತೆ ಪಟ್ಟಣದ ಹಾಸ್ಟೆಲ್‌ಗಳಿಗೆ ಭೇಟಿ ನೀಡಿದ ನಂತರ ಮಾತನಾಡಿ, ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡಿದ್ದು, ಸರಿ ಪಡಿಸುವಂತೆ ತಿಳಿಸಲಾಗಿದೆ. ಮಾಲೂರು ತಾಲೂಕಿಗೆ ಮುಂದಿನ ವಾರ ಮತ್ತೆ ಭೇಟಿ ನೀಡಲಿದ್ದು, ಸೌಕರ್ಯಗಳು ಪೂರೈಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ನಂತರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಆಹಾರ ಸರಬರಾಜು ಮಾಡುವ ಚಿಕ್ಕಕುಂತೂರಿನ ಅಂಗನವಾಡಿ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
'ಅಂಬೇಡ್ಕರ್ ಸಿದ್ಧಾಂತ ಅಳವಡಿಸಿಕೊಳ್ಳಿ'
ಟೇಕಲ್: ಪ್ರಜಾಪ್ರಭುತ್ವದ ಹರಿಕಾರ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ದಲಿತ ಸೇನೆ ಮಾಲೂರು ತಾಲೂಕು ಅಧ್ಯಕ್ಷ ಉಳ್ಳೇರಹಳ್ಳಿ ನಾಗರಾಜ್ ತಿಳಿಸಿದರು. ಉಳ್ಳೇರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಹಾಗೂ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿ, ಸಂಸ್ಥಾಪಕ ಅಧ್ಯಕ್ಷ ಸೂಲಿಕುಂಟೆ ಆನಂದ್ ನೇತೃತ್ವದಲ್ಲಿ ತಾಲೂಕಿನಾದ್ಯಂತ ಸಂಘಟನೆ ಬಲಗೊಳಿಸಲಾಗುತ್ತಿದೆ ಎಂದರು. ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಮಾತನಾಡಿದರು.  ವಿಶ್ವನಾಥ್, ಮಂಜುನಾಥಗೌಡ, ವೆಂಕಟೇಶ್, ಅವಿನಾಶ್, ಹುಣಸನಹಳ್ಳಿ ರಮೇಶ್, ನಾಗಲಾಪುರ ರಾಜೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.