ಕೋಲಾರ

ಹೊಡೆದ ಪೈಪ್: ನೀರು ಪೋಲು

Published On :

ಚಿಂತಾಮಣಿ: ನಗರಸಭೆ ನಿರ್ಲಕ್ಷ್ಯದಿಂದ ನೀರಿನ ಸಂಪರ್ಕದ ಪೈಪ್ ಹೊಡೆದು ನೀರು ವ್ಯರ್ಥವಾಗುತ್ತಿದ್ದರೂ ಅಧಿಕಾರಿಗಳು ಗಮನ ಹರಿಸದಿರುವುದಕ್ಕೆ ನಾಗರಿಕರು ಅಸಮದಾನ ವ್ಯಕ್ತಪಡಿಸಿದ್ದಾರೆ. ನಗರದ ಪಿಲ್ಟರ್ ಬಡ್ ಬಳಿ ಇರುವ ನಗರಸಭೆ ನೀರು ಸರಬರಾಜು ಕೇಂದ್ರದ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ನೀರಿನ ಪೈಪ್ ಹೊಡೆದಿದೆ. ಇದರಿಂದ ನೀರು ವ್ಯರ್ಥವಾಗುತ್ತಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಚೆಕ್ ವಿತರಣೆ


ಚಿಂತಾಮಣಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೇ. 22.75 ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ನಗರಸಭಾ ಅಧ್ಯಕ್ಷ ಜಿಯಾವುಲ್ಲಾ ಹಾಗೂ ಉಪಾಧ್ಯಕ್ಷ ತುಳಸಿರವಿ ಚೆಕ್‌ಗಳನ್ನು ವಿತರಿಸಲಾಯಿತು.
ನಗರದ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಕೊಠಡಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಶೇ. 22.75 ಯೋಜನೆಯಡಿಯಲ್ಲಿ ಸುಮಾರು 270 ಫಲಾನುಭವಿಗಳಿಗೆ ಚೆಕ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಚನ್ನೇಗೌಡ, ಸದಸ್ಯರಾದ ಆರ್. ಪ್ರಕಾಶ್, ಮಂಜುನಾಥ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ನೀತಿ ಸಂಹಿತೆ ಉಲ್ಲಂಘನೆ: ನಗರಸಭೆ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಕೊಠಡಿಗಳಲ್ಲಿ ನಗರಸಭಾ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಚೆಕ್‌ಗಳನ್ನು ವಿತರಿಸದೆ ಏಕಪಕ್ಷೀಯವಾಗಿ ಚೆಕ್‌ಗಳನ್ನು ವಿತರಿಸುತ್ತಿರುವುದು ಸರಿಯಿಲ್ಲವೆಂದು, ನೀತಿ ಉಲ್ಲಂಘಿಸಿ ಚೆಕ್‌ಗಳನ್ನು ವಿತರಿಸಿರುವುದು ಸರಿಯಿಲ್ಲವೆಂದು ಬಿಜೆಪಿ ನಗರಸಭಾ ಸದಸ್ಯ ಸುಜಾತಮ್ಮ ಶಿವಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ದಲಿತ ಮಕ್ಕಳಿಗೆ ವೇದಿಕೆ ಮೇಲೆ ಪ್ರೋತ್ಸಾಹ ಧನ ನೀಡಿದ್ದಲ್ಲಿ ಅವರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿದಂತಾಗುತ್ತದೆಯೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.