ರಸ್ತೆ ಕಾಮಗಾರಿಗೆ ಚಾಲನೆ
ಕೆಜಿಎಫ್: ಕ್ಷೇತ್ರದ ಗ್ರಾಮೀಣ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ಗಡಿ ಭಾಗದ ಗ್ರಾಮಗಳಲ್ಲಿ ಹದೆಗೆಟ್ಟಿರುವ ರಸ್ತೆಗಳ ದುರಸ್ತಿಗೆ ಪ್ರಾಮುಖ್ಯತೆ ನೀಡಲಾಗಿದೆ. ರಸ್ತೆಗಳ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಶಾಸಕಿ ವೈ.ರಾಮಕ್ಕ ಹೇಳಿದರು.
ಬೇತಮಂಗಲ ಗ್ರಾಮದ ಎಂಟನೇ ಮತ್ತು ಎರಡನೇ ವಾರ್ಡ್ ಹಾಗೂ ಗ್ರಾಮೀಣ ಗಡಿ ಪ್ರದೇಶ ಸುಂದರಪಾಳ್ಳ ಗ್ರಾಮದಲ್ಲಿ ಎಸ್ಸಿಪಿ ಯೋಜನೆಯಡಿ ಸುಮಾರು 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಅದೇ ರೀತಿ ಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಸ್ತೆಗಳ ನಿರ್ಮಾಣ ಹಾಗೂ ಗ್ರಾಮೀಣ ಭಾಗದಿಂದ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಯಿಂದ ವಾಹನ ಸಂಚಾರಕ್ಕೆ, ಗ್ರಾಮಸ್ಥರಿಗೆ, ಹಳ್ಳಿಗಳಿಂದ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ತಾವು ಶಾಸಕರಾಗಿದ್ದಾಗಾ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು.
ಜಿಪಂ ಸದಸ್ಯ ಆ.ಮು.ಲಕ್ಷ್ಮೀನಾರಾಯಣ, ಗೋವಿಂದಮ್ಮ, ಗೋಪಾಲಪ್ಪ, ಧರಣಿ, ಕಿರಣ್, ಗಣಿ, ನಂಜುಂಡಪ್ಪ, ಮುನಿಸ್ವಾಮಿರೆಡ್ಡಿ ಸೇರಿದಂತೆ ಅನೇಕರು ಹಾಜರಿದ್ದರು.
ಪೊಲೀಸರ ವಿರುದ್ಧ ಎಸ್ಪಿ ಗರಂ
ಚಿಂತಾಮಣಿ: ಸ್ಥಳೀಯ ಪೊಲೀಸರ ಕಾರ್ಯವೈಖರಿ ಬಗ್ಗೆ ಚಿಕ್ಕಬಳ್ಳಾಪುರ ಎಸ್ಪಿ ಡಾ.ದಿವ್ಯಾ ಗೋಪಿನಾಥ್ ತೀವ್ರ ಅಮಾಧಾನ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಹಾಗೂ ನಗರದ ಪ್ರದೇಶಗಳಲ್ಲಿ ಸರಗಳ್ಳತನ, ಮರಳು ಮಾಫಿಯಾ, ಜೂಜಾಟ, ರೈಸ್ ಪುಲ್ಲಿಂಗ್ ಅಕ್ರಮಗಳನ್ನು ತಡೆಯಲು ಪೊಲೀಸರು ಸಾರ್ವಜನಿಕರ ಸಹಕಾರ ಪಡೆಯಬೇಕು ಎಂದು ತಿಳಿಸಿದರು. ಪೊಲೀಸರು ಸ್ಥಳೀಯವಾಗಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ವಿಶೇಷ ಗಮನ ಹರಿಸಿ ಹತೋಟಿಗೆ ತರಬೇಕು. ಈ ಪ್ರಕ್ರಿಯೆಯಲ್ಲಿ ಸ್ಥಳೀಯ ಪೊಲೀಸರ ವೈಫಲ್ಯತೆ ಎದ್ದು ಕಾಣುತ್ತಿದ್ದೆ ಎಂದು ಅವರು ಹೇಳಿದರು. ಬಟ್ಲಹಳ್ಳಿ ಹಾಗೂ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ಪೇದೆಗಳನ್ನು ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ. ಆದರೂ ಅವರು ಮರಳು ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿರುವುದ ಬಗ್ಗೆ ಕಿಡಿ ಕಾರಿದರು. ಈ ವೇಳೆ, ಡಿವೈಎಸ್ಪಿ ಸಣ್ಣತಿಮ್ಮಪ್ಪ, ಸಿಪಿಐ ನಂಜಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

