ವೈಯಕ್ತಿಕ ಶೌಚಾಲಯಗಳಿಗೆ ಅನುದಾನ'
ಕೋಲಾರ: ತಾಲೂಕಿನ ಹುತ್ತೂರು ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯತಿ ಹಾಗೂ ಎಫ್.ಇ.ಎಸ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಸಕ್ತ ಸಾಲಿನ ಮೊದಲನೇ ಗ್ರಾಮ ಸಭೆ ನಡೆಯಿತು.
ಪ್ರತಿಯೊಂದು ಮನೆಯಲ್ಲೂ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಂಡಲ್ಲಿ, ಸರ್ಕಾರದಿಂದ ಶೀಘ್ರವಾಗಿ ಸಹಾಯಧನ ಬಿಡುಗಡೆ ಮಾಡುವುದಾಗಿ ಜಿ.ಪಂ. ಸಿಇಓ ವಿನೂತ್ಪ್ರಿಯಾ ತಿಳಿಸಿದರು. ಜಿ.ಪಂ. ಸದಸ್ಯ ಡಿ.ವಿ. ಹರೀಶ್ ಮಾತನಾಡಿ ಯಾವುದೇ ಪಕ್ಷಭೇದವಿಲ್ಲದೆ ಸರ್ಕಾರದ ಸೌಲತ್ತುಗಳನ್ನು ಶೀಘ್ರವಾಗಿ ತಲುಪಿಸಲು ಜನಪ್ರತಿನಿಧಿಗಳು ಮತ್ತು ಸಿಬ್ಬಂದಿ ಶ್ರಮಿಸಬೇಕೆಂದು ಕರೆ ನೀಡಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಗ್ರಾಮ ಪಂಚಾಯತಿ ನೋಡಲ್ ಅಧಿಕಾರಿ ರವಿಚಂದ್ರ, ಕೈಗಾರಿಕಾ ವಿಸ್ತರಣಾಧಿಕಾರಿಗಳ ಸಮ್ಮುಖದಲ್ಲಿ ಸಭೆ ಯಶಸ್ವಿಯಾಗಿ ನಡೆಯಿತು. ಗ್ರಾಮ ಪಂಚಾಯತಿ ಅಧ್ಯಕ್ಷ ನಾರಾಯಣಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಹೆಚ್.ಕೆ. ಮಂಜುನಾಥ್, ಸದಸ್ಯರಾದ ಬೆಳಗಾನಹಳ್ಳಿ ವೆಂಕಟಮುನಿಯಪ್ಪ, ಗಂಗಾಧರ್, ಸಿ.ಬಿ. ವೆಂಕಟೇಶಪ್ಪ, ಗೋವಿಂದಪ್ಪ, ಸುಶೀಲಮ್ಮ ಇದ್ದರು.
ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಶಿವಯೋಗಿಸ್ವಾವು ಬಿರುಸಿನ ಪ್ರಚಾರ
ಬಂಗಾರಪೇಟೆ: ವಿಧಾನಪರಿಷತ್ ಚುನಾವಣೆ ಪ್ರಚಾರದ ಕಾವು ತಾರಕ್ಕೇರುತ್ತಿದ್ದು, ಪುನರಾಯ್ಕೆ ಬಯಸಿ ಸ್ಪರ್ಧಿಸಿರುವ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಿವಯೋಗಿಸ್ವಾವು ಪಟ್ಟಣದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.ಕಳೆದ ಬಾರಿ ಆಯ್ಕೆಯಾದ ಬಳಿಕ ಎರಡು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದನ್ನು ಹೊರತು ಪಡಿಸಿದರೆ, ಶಿವಯೋಗಿಸ್ವಾವು ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂಬ ಆರೋಪವಿದೆ. ಈಗ ಮತ್ತೆ ಚುನಾವಣೆ ಬಂದಿರುವುದರಿಂದ ಶಿವಯೋಗಿಸ್ವಾವು ಪ್ರಚಾರಕ್ಕೆ ಬಂದಿದ್ದು, ಜೊತೆ ಪಕ್ಷದ ಮುಖಂಡರನ್ನು ಬಿಟ್ಟರೆ ಮತದಾರರ ಸುಳಿವೇ ಇರಲಿಲ್ಲ. ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಹಾಗೂ ನವಚೇತನ ವಿದ್ಯಾ ಸಂಸ್ಥೆಯಲ್ಲಿ ಮತದಾರರನ್ನು ಭೇಟಿ ಮಾಡಿ ಮತ್ತೊಮ್ಮೆ ತಮ್ಮನ್ನು ಪುನರಾಯ್ಕೆ ಮಾಡುವಂತೆ ಮನವಿ ಮಾಡಿದರು.ಮಾಜಿ ಶಾಸಕರಾದ ಎಂ.ನಾರಾಯಣಸ್ವಾಮಿ ವೆಂಕಟಮುನಿಯಪ್ಪ,ಪುರಸಭೆ ಸದಸ್ಯ ಬಿ.ಸಿ.ಮೂರ್ತಿ, ನಗರ ಅಧ್ಯಕ್ಷ ರಮೇಶ್, ಮುಖಂಡರಾದ ಪ್ರಭಾಕರ್, ನಾಗಪ್ರಕಾಶ್, ಕಣಿಂಬೆಲೆ ಚಿನ್ನಪ್ಪ, ನವಚೇತನ ಶಾಲೆ ಕಾರ್ಯದರ್ಶಿ ಎಲ್.ರಾಮಕೃಷ್ಣ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

