ಕೋಲಾರ

10ರಿಂದ 5 ದಿನಗಳ ನಾಟಕ ಪ್ರದರ್ಶನ

Published On :

ಗುಡಿಬಂಡೆ: ಐಶ್ವರ್ಯ ಕಲಾ ನಿಕೇತನ ತಂಡದಿಂದ ನಾಟಕೋತ್ಸವ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ನವದೆಹಲಿಯ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಚಿಕ್ಕಬಳ್ಳಾಪುರದ ಐಶ್ವರ್ಯ ಕಲಾ ನಿಕೇತನ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಐದು ದಿನಗಳ ಕಾಲ ನಾಟಕ ಪ್ರದರ್ಶನ ಏರ್ಪಡಿಸಿದೆ. ಜೂ.10 ರಿಂದ 14ರ ತನಕ ಪ್ರತಿ ದಿನ ಸಂಜೆ 7-30ಕ್ಕೆ ಸುಪ್ರಸಿದ್ದ ಕಲಾವಿದರಿಂದ ಪೌರಾಣಿಕ ಸಾಮಾಜಿಕ ಮತ್ತು ಹಾಸ್ಯಕ್ಕೆ ಸಂಬಂಧ ಪಟ್ಟ ನಾಟಕಗಳು ಪ್ರದರ್ಶನಗೊಳ್ಳಲಿದ್ದು, ಹಲವಾರು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕೋತ್ಸವದಲ್ಲಿ ಪಾಲ್ಗೊಂಡು ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ವ್ಯವಸ್ಥಾಪಕ ಜಿ.ವಿ ಪ್ರಸನ್ನಕುಮಾರ್ ಕೋರಿದ್ದಾರೆ. ಕಾರ್ಯಾಗಾರ:  ಬಂಗಾರಪೇಟೆ ಗ್ರಾಮಗಳಲ್ಲಿನ ಅನಕ್ಷರಸ್ಥರನ್ನು ಗುರುತಿಸಿ ಬಿಡುವಿನ ವೇಳೆಯಲ್ಲಿ ಅವರನ್ನು ಪ್ರೇರಣೆಗೊಳಿಸಿ ಅಕ್ಷರಸ್ಥರನ್ನಾಗಿ ಮಾಡಲು ಶ್ರಮಿಸಬೇಕೆಂದು ಘಟ್ಟಕಾಮಧೇನಹಳ್ಳಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ್  ತಿಳಿಸಿದರು. ಲೋಕಶಿಕ್ಷಣ ಸಮಿತಿಯಿಂದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


'ಪರಿಸರ ಉಳಿವಿಗಾಗಿ ಪ್ರತಿಯೊಬ್ಬರ ಶ್ರಮ ಅಗತ್ಯ'


ಚಿಂತಾಮಣಿ: ಪರಿಸರ ಉಳಿವಿಗಾಗಿ ಪ್ರತಿಯೊಬ್ಬರೂ ಮನೆ ಎದುರು ಮಗುವಂತೆ ಒಂದು ಗಿಡ ನೆಟ್ಟು ಪೋಷಿಸಿದರೆ ಪ್ರಕೃತಿ ಉಳಿಸಿ ಬೆಳೆಸಲು ಸಾಧ್ಯ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ವೆಂಕಟರಮಣರೆಡ್ಡಿ ಅಭಿಪ್ರಾಯಪಟ್ಟರು.ಇಲ್ಲಿನ ವೆಂಕಟಗಿರಿಕೋಟೆ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖ್ಯ ಶಿಕ್ಷಕಿ ಎಂ.ಮಂಜುಳ ಮಾತನಾಡಿ, ಗಿಡ-ಮರಗಳಿಂದ ಪ್ರಾಣಿ-ಪಕ್ಷಿಗಳು ಮಾನವರು ಆರೋಗ್ಯವಂತರಾಗಲು ಸಾಧ್ಯ ಆದರೆ ಇದನ್ನು ಅರಿಯದೆ ಮರ ಗಿಡಗಳನ್ನು ಕಡಿದು ಪರಿಸರವನ್ನು ನಾಶ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.ಶಾಲಾ ಶಿಕ್ಷಕರಾದ ಸಿ.ಓಂಕಾರಪ್ಪ, ಕೃಷ್ಣಪ್ಪ, ಶ್ರೀನಿವಾಸ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.