ಖಾಸಗಿ ಸಂಸ್ಥೆ ಮತ್ತಷ್ಟು ಉದಾರವಾಗಲಿ: ಶಾಸಕ
ಮಾಲೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಮೂಲ ಸೌಕರ್ಯ ಒದಗಿಸುವಲ್ಲಿ ಸರ್ಕಾರಗಳು ವಿಫಲ ವಾಗುತ್ತಿರುವ ಈ ಸನ್ನಿವೇಶದಲ್ಲಿ ಖಾಸಗಿ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಸೌಕರ್ಯಗಳನ್ನು ಒದಗಿಸಿಕೊಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಮಂಜುನಾಥ್ಗೌಡ ಹೇಳಿದರು.
ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ಬಿಇಎಲ್ ಸಂಸ್ಥೆ ನಿರ್ಮಿಸಿ ಕೊಟ್ಟಿರುವ ನಾಲ್ಕು ಶಾಲಾ ಕೊಠಡಿ ಹಾಗೂ ಶೌಚಾಲಯ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರಿಗೆ ಸಮೀಪವಿದ್ದರೂ ಮಾಲೂರು ತಾಲೂಕು ಎಲ್ಲ ಕ್ಷೇತ್ರದಲ್ಲೂ ಹಿಂದುಳಿದಿದೆ. ಟೇಕಲ್-ಮಾಸ್ತಿ ಭಾಗದಲ್ಲಂತೂ ಗ್ರಾಮಗಳು ಇನ್ನೂ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಗಡಿಭಾಗಗಳು ಸೇರಿದಂತೆ ಒಳಭಾಗದ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳು ಇಲ್ಲದೆ ಗ್ರಾಮಾಂತರ ಪ್ರದೇಶಗಳ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ.
ಇದರಿಂದ ಗ್ರಾಮೀಣ ಮಕ್ಕಳು ಪಟ್ಟಣದ ಪ್ರದೇಶದ ಮಕ್ಕಳ ಸಮನಾಗಿ ಜ್ಞಾನ ಸಂಪಾದಿಸಲು ಆಗದೆ ಉನ್ನತ ಶಿಕ್ಷಣ ಅವರ ಪಾಲಿಗೆ ಮರೀಚಿಕೆಯಾಗುತ್ತಿದೆ. ಸರ್ಕಾರವು ಸಹ ಈ ನಿಟ್ಟಿನಲ್ಲಿ ಗ್ರಾಮ ಭಾಗದಲ್ಲಿ ಶೈಕ್ಷಣಿಕ ಸೌಲಭ್ಯ ನೀಡಲು ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಲ್ ಸಂಸ್ಥೆ ನಿವೃತ್ತ ಅಧಿಕಾರಿ ರಾಮಕೃಷ್ಣ, ನಿರ್ದೇಶಕ ಅಮೋಲ್ ನೆವಾಸ್ಕರ್ ಮತ್ತಿತರರು ಮಾತನಾಡಿದರು.
ಶಾಸಕ ಮಂಜುನಾಥ್ಗೌಡ, ಪುರಸಭೆ ಅಧ್ಯಕ್ಷೆ ಭಾರತಮ್ಮ ನಂಜುಂಡಪ್ಪ, ಬೆಲ್ ಸಂಸ್ಥೆಯ ಅಧಿಕಾರಿಗಳನ್ನೂ, ಗುತ್ತಿಗೆದಾರರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

