ಯುವಕರಿಗೆ ಕ್ರೀಡಾಸ್ಫೂರ್ತಿ ಬೇಕು
ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆಯಲ್ಲಿ ಸುದರ್ಶನ ಅಭಿಪ್ರಾಯ
ಕೋಲಾರ: ಗ್ರಾಮೀಣ ಪ್ರದೇಶದ ಯುವಕರು ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲಾದರೂ ಯಶಸ್ಸು ಸಾಧಿಸಬಹುದು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಹೇಳಿದರು.
ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆ.ಎ. ನಾರಾಯಣಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಘಟಕ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪಂದ್ಯಾವಳಿಯಲ್ಲಿ ಕ್ರೀಡಾಪಟುಗಳು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಳ್ಳಬಾರದು. ಸೋಲು-ಗೆಲವನ್ನು ಕ್ರೀಡಾಸ್ಫೂರ್ತಿಯಿಂದ ಸ್ವೀಕರಿಸಬೇಕು. ನಾರಾಯಣಗೌಡ ಅವರು ಕನ್ನಡ ನಾಡು, ನುಡಿ ರಕ್ಷಣೆ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ಇವರು ಸರ್ಕಾರದ ಜತೆ ಸಹಕರಿಸಿಕೊಂಡು ತಮ್ಮ ಹೋರಾಟವನ್ನು ಪರಿಣಾಮಕಾರಿಯಾಗಿ ಮುಂದುವರೆಸಿಕೊಂಡು ಯಶಸ್ವಿಯಾಗಲಿ ಎಂದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧಕ್ಷ ಮೇಡಿಹಾಳ ರಾಘವೇಂದ್ರ, ವೇಮಗಲ್ ಪಿಎಸ್ಐ ಯಶವಂತ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರವೇ ತಾಲೂಕು ಅಧ್ಯಕ್ಷ ಪ್ರಭಾಕರ್ಗೌಡ, ವೇಮಗಲ್ ಹೋಬಳಿ ಅಧ್ಯಕ್ಷ ನಾಗೇಶ್, ಉರಿಗಿಲಿ ಗ್ರಾಪಂ ಉಪಾಧ್ಯಕ್ಷ ಮುನಿರಾಜು, ಮುಖಂಡರಾದ ಗಾಯತ್ರಿ ಮುನಿರಾಜು, ಲೋಕೇಶ್, ಹರೀಶ್, ಸಂಪಂತ್ಕುಮಾರ್, ಶಂಕರ್, ನರೇಶ್ ಬಾಬು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

