ವಿದ್ಯುತ್ ತಗುಲಿ ಸಾವು
ಚಿತಾಮಣಿ: ವಿದ್ಯುತ್ ತಂತಿತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಕಂಚಾರ್ಲಹಳ್ಳಿ ಠಾಣೆ ವ್ಯಾಪ್ತಿಯ ಮಾಸನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸುದೀಪ್ (25) ಮೃತಪಟ್ಟ ಯುವಕ. ಕಂಚಾರ್ಲಹಳ್ಳಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಘರ್ಷಣೆ: ಗ್ರಾಮಾಂತರ ಠಾಣೆ ವ್ಯಾಪ್ತಿಯ ಜಂಗಮಶೀಗಹಳ್ಳಿ ಬಾಬು ಕ್ಷುಲಕ ಕಾರಣಕ್ಕೆ ಮುನಿರಾಜು ಹಾಗೂ ಅಕ್ಕಾಯಮ್ಮ ಎಂಬವರ ಮೇಲೆ ಹಲ್ಲೆಮಾಡಿದ ಪರಿಣಾಮ ಇಬ್ಬರು ತ್ರೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ದ್ವಿಚಕ್ರ ವಾಹನ ಕಳವು
ಕೆಜಿಎಫ್: ದೇವಸ್ಥಾನ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಘಟನೆ ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಗುಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಕ್ಯಾಸಂಬಳ್ಳ ನಿವಾಸಿ ಶಂಕರಪ್ಪ ಅವರು ಶನಿವಾರ ಸಂಜೆ ಗುಟ್ಟಹಳ್ಳಿ ಗ್ರಾಮದಲ್ಲಿರುವ ಬಂಗಾರು ತಿರುಪತಿ ದೇವಸ್ಥಾನಕ್ಕೆ ಬಂದು ತಮ್ಮ ದ್ವಿಚಕ್ರ ವಾಹನವನ್ನು ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದರು. ದೇವರಿಗೆ ಪೂಜೆ ಸಲ್ಲಿಸಿ ಬಂದು ನೋಡಿದಾಗ ವಾಹನ ಕಳವಾಗಿತ್ತು. ಈ ಬಗ್ಗೆ ಅವರು ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

