ಕೋಲಾರ

ರಫೀಉಲ್ಲಾ ನೇಮಕ

Published On :

ಚಿಕ್ಕಬಳ್ಳಾಪುರ: ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿ ಬಿ.ಎಸ್. ರಫೀಉಲ್ಲಾ ಮರು ನೇಮಕ ಮಾಡಿ ರಾಜ್ಯ ವಕ್ಫ್  ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೀರ್ ಅನೀಸ್ ಸಿರಾಜ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೊಹಮದ್‌ಯುಸುಫ್ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೀರ್ ಅನೀಸ್  ಸಿರಾಜ್  ಸಮ್ಮುಖದಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿ ಬಿ.ಎಸ್. ರಫೀಉಲ್ಲಾ ಅಧಿಕಾರ ಸ್ವೀಕರಿಸಿದರು. ನಂತರ ನಗರದಲ್ಲಿರುವ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಕಚೇರಿಗೆ ಆಗಮಿಸಿ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಮೊಹ್ಮದ್ ಜೀಲಾನಿ ಚೆಂಡೂರು ವೆಂಕಟೇಶ್ , ಅಬ್ದುಲ್  ರೆಹಮಾನ್, ಪ್ರಧಾನ ಕಾರ್ಯದರ್ಶಿ ಅಮಾನುಲ್ಲಾ, ಅಹಮದ್ ಇದ್ದರು.



ರಾಜಾ ಕಾಲುವೆ ಸ್ವಚ್ಛತೆಗೆ ಮುಂದಾದ ಪುರಸಭೆ
ಮಾಲೂರು: 'ಕನ್ನಡಪ್ರಭ'ದಲ್ಲಿ ಮಾಲೂರು ತಾಲೂಕು ಕೆರೆಗಳ ರಕ್ಷಿಸಿ ಎಂಬ ವರದಿ ಪ್ರಕಟವಾಗುತ್ತಿದ್ದ ಹಾಗೆ ಎಚ್ಚೆತ್ತು ಕೊಂಡಿರುವ ಸ್ಥಳೀಯ ಪುರಸಭೆ ಸೋಮವಾರ ದೊಡ್ಡಕೆರೆ ಬಳಿಯ ರಾಜಾ ಕಾಲುವೆ ಸ್ವಚ್ಛಗೊಳಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಪಟ್ಟಣದ ಪಟಾಲಮ್ಮ ದೇವಿ ದೇವಾಲಯ ಬಳಿ ಇರುವ ರಾಜಕಾಲುವೆಯ ಸ್ವಚ್ಚಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಪುರಸಭೆ ಉಪಾಧ್ಯಕ್ಷೆ ಶ್ರೀ ವಲ್ಲಿ ರಮೇಶ್,ಸದಸ್ಯ ಜಾಕೀರ್ ಖಾನ್,ಅಭಿಯಂತರ ಮಂಜುನಾಥ್,ನಾಗರಾಜ್,ಆರೋಗ್ಯ ನಿರೀಕ್ಷಕ ಉದಯ್,ಮುಖಂಡ ನಂಜುಂಡಪ್ಪ,ರವಿ ಇದ್ದರು.
ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2013-14 ಮತ್ತು 2014-15ನೇ ಸಾಲಿನ ಶಿಷ್ಯ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಶಾಸ್ತ್ರೀಯ, ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ, ನೃತ್ಯ ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಸೇರಿದಂತೆ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 5 ಸಾವಿರ ರು. ಶಿಷ್ಯವೇತನ ನೀಡಲಾಗುತ್ತದೆ. ಅರ್ಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿ ಜೂ.30 ರೊಳಗೆ ಸಲ್ಲಿಸಬೇಕೆಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ರಿಜಿಸ್ಟ್ರಾರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯಿಂದ 2014-15 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ ಮತೀಯರು, ಪಾರ್ಸಿಗಳು ಹಾಗೂ ಜೈನ ಸಮುದಾಯಕ್ಕೆ ಸೇರಿದ 1 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.



'ಹಣ ದುರುಪಯೋಗವಾಗಿಲ್ಲ'
ಚಿಂತಾಮಣಿ: ತಾಲೂಕಿನ ಕೋಡೇಗಂಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಾಲಾಭಿವೃದ್ಧಿ ಹಣ ದುರುಪಯೋಗ ಮಾಡಿಲ್ಲ ಎಂದು ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶಿವಣ್ಣ ಹೇಳಿದ್ದಾರೆ. 2010-11ರಿಂದ 2013-14 ನೇ ಸಾಲಿನ ಅವಧಿಯಲ್ಲಿ ಎಲ್ಲಾ ಅನುದಾನ ನಿಯಮಾನುಸಾರವಾಗಿ ಬಳಸಲಾಗಿದೆ.  ಪ್ರತಿ ಕಾಮಗಾರಿಗೆ ಸಂಬಂಧಿಸಿದ ಲೆಕ್ಕ ಪತ್ರಗಳನ್ನು ನಾನೇ ನಿರ್ವಹಿಸಿದ್ದೇನೆ. ಈ ಅವಧಿಯಲ್ಲಿ ಮುಖ್ಯೋಪಾಧ್ಯಾಯರು ಯಾವುದೇ ರೀತಿಯಾದ ಹಣ ದುರುಪಯೋಗ ಮಾಡಿರುವುದಿಲ್ಲ. ಮುಖ್ಯ ಶಿಕ್ಷಕ ವೆಂಕಟಸ್ವಾಮಿಯವರಿಗೆ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.