ಅನುದಾನ ಅಸಮರ್ಪಕ ಬಳಕೆ: ಪ್ರತಿಭಟನೆ
ಶಿಡ್ಲಘಟ್ಟ: ತಾಪಂಗೆ ಬಿಡುಗಡೆಯಾಗುತ್ತಿರುವ ಅನುದಾನಗಳಲ್ಲಿ ವಿಕಲಚೇತನರ ಅಭಿವೃದ್ಧಿ ಮೀಸಲಿಡಬೇಕಾಗಿರುವ ಶೇ.3ರ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲವೆಂದು ಆರೋಪಿಸಿ ತಾಲೂಕು ವಿಕಲಚೇತನರ ಒಕ್ಕೂಟದ ಪದಾಧಿಕಾರಿಗಳು ತಾಪಂ ಕಚೇರಿ ಮುಂದೆ ಧರಣಿ ನಡೆಸಿದರು. ಕಳೆದ 2012-13 ನೇ ಸಾಲಿನಿಂದ ಈವರೆಗೂ ಮೂರು ಮಂದಿ ಕಾರ್ಯನಿರ್ವಹಣಾಧಿಕಾರಿಗಳು ಬದಲಾವಣೆಯಾಗಿದ್ದಾರೆ. ಪ್ರತಿವರ್ಷವೂ ಬರುತ್ತಿರುವ ಅನುದಾನಗಳಲ್ಲಿ ಶೇ.3 ರಷ್ಟು ಅನುದಾನ ಬಳಕೆ ಮಾಡಿ ವಿಕಲಚೇತನರ ಅಭಿವೃದ್ಧಿಗಾಗಿ ಬಳಕೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದೂರಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಾಪಂ ಅಧ್ಯಕ್ಷ ಯರಬಚ್ಚಪ್ಪ, ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಶೇ.3 ರ ಅನುದಾನವನ್ನು ಸರ್ಕಾರದ ಸುತ್ತೋಲೆ ಪ್ರಕಾರ ಯಾವ ರೀತಿ ಬಳಕೆ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ಮಾಡಿ ಒಂದು ವಾರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಕಾರ್ಯನಿರ್ವಹಣಾಧಿಕಾರಿ ಉಮೇಶ್ ಮಾತನಾಡಿ, ಸರ್ಕಾರದ ಅನುದಾನ ವೈಯಕ್ತಿಕವಾಗಿ ನೀಡಲು ಅವಕಾಶವಿಲ್ಲ. ಫಲಾನುಭವಿಗಳ ಪಟ್ಟಿ ತಯಾರಿಸಿ ಒಂದು ವಾರದೊಳಗೆ ವಿತರಣೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ ನಂತರ ಧರಣಿ ವಾಪಸ್ ಪಡೆಯಲಾಯಿತು. ತಾಲೂಕು ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಚಿಕ್ಕಮಾರಪ್ಪ, ಸಂತೋಷ್, ಮುನಿರಾಜು, ಶಾಂತಪ್ಪ, ವಿನೋದಮ್ಮ, ಬಾಸ್ಕರ್, ಸಿದ್ದಪ್ಪ, ರಾಜಣ್ಣ, ರೂಪ, ಬೈರಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

