ಆರೋಗ್ಯವಂತ ಪೊಲೀಸರಿಂದ ಉತ್ತಮ ಕೆಲಸ ನಿರೀಕ್ಷೆ ಸಾಧ್ಯ
ಚಿಕ್ಕಬಳ್ಳಾಪುರ: ಸಾಮಾನ್ಯವಾಗಿ ಬಿಡುವಿಲ್ಲದೇ ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತ ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಶ್ರಮಿಸುವ ಪೊಲೀಸರ ಆರೋಗ್ಯ ತಪಾಸಣೆ ಕಾರ್ಯವನ್ನು ಕೈಗೊಳ್ಳಲಾಯಿತು.
ಪೊಲೀಸ್ ಯೋಗಕ್ಷೇವು ಸಪ್ತಾಹದ ಅಂಗವಾಗಿ ನಗರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಆರ್ .ಎಲ್ . ಜಾಲಪ್ಪ ಆಸ್ಪತ್ರೆ, ನಾರಾಯಣ ಹೃದಯಾಲಯ ಮತ್ತು ದೃಷ್ಟಿ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪೊಲೀಸರಿಗಾಗಿ ಹಮ್ಮಿಕೊಳ್ಳಲಾಗಿತ್ತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಎಸ್ಪಿ ದಿವ್ಯ ಗೋಪಿನಾಥ್, ಸಮಾಜದ ರಕ್ಷಣೆ ಮಾಡುವ ಪೊಲೀಸರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಕಾಳಜಿಯನ್ನು ಕೊಡಬೇಕು. ಒಳ್ಳೆಯ ಆರೋಗ್ಯವಂತ ಪೊಲೀಸರಿಂದ ಉತ್ತಮ ಕೆಲಸವನ್ನು ನಿರೀಕ್ಷಿಸಲು ಸಾಧ್ಯ ಎಂದರು.
ಪೊಲೀಸರು ಸದಾ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸಬೇಕಾಗುತ್ತದೆ. ಬಿಡುವನ್ನು ಪಡೆಯಬೇಕೆಂಬ ಮನಸ್ಸಿದ್ದರೂ ಅನಿರೀಕ್ಷಿತವಾಗಿ ಎದುರಾಗುವ ಹೆಚ್ಚುವರಿ ಕೆಲಸಗಳಿಂದ ಅಧಿಕ ಒತ್ತಡಗಳಿದ್ದರೂ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲೇ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಒತ್ತಡವನ್ನು ಸಮರ್ಥವಾಗಿ ಎದುರಿಸಿ ಕಾರ್ಯ ನಿರ್ವಹಿಸುವಂತಹ ಮನೋಭಾವನೆಯನ್ನು ಮೊದಲು ಬೆಳೆಸಿಕೊಳ್ಳಬೇಕೆಂದರು. ಆಗಾಗ ಆರೋಗ್ಯದ ತಪಾಸಣೆ ಮಾಡಿಸಿಕೊಂಡು ತಮ್ಮ ಮತ್ತು ತಮ್ಮ ಕುಟುಂಬಸ್ಥರ ಆರೋಗ್ಯವನ್ನು ಕಾಪಾಡಿಕೊಳ್ಳಲು ಒತ್ತು ಕೊಡಬೇಕೆಂದು ಸಲಹೆ ನೀಡಿದರು.
ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಮಂಜುನಾಥ್ ಮಾತನಾಡಿ, ರಕ್ಷಣೆಯ ಜವಾಬ್ದಾರಿಯನ್ನು ಹೊಂದಿರುವ ಪೊಲೀಸರನ್ನು ಪ್ರತಿಯೊಬ್ಬರು ಗೌರವಿಸಬೇಕೆಂದ ಅವರು, ಪೊಲೀಸರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಸವಲತ್ತುಗಳನ್ನು ಸಕಾಲದಲ್ಲಿ ಒದಗಿಸಬೇಕೆಂದರು. ಈ ಸಂದರ್ಭದಲ್ಲಿ ಡಿವೈಎಸ್ ಪಿ ಸಣ್ಣ ತಿಮ್ಮಪ್ಪ, ಚಿನ್ನಸ್ವಾಮಿ, ಸರ್ಕಲ್ ಇನ್ಸೆಪೆಕ್ಟರ್ ಬಾಲಾಜಿ ಸಿಂಗ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

