ನಾರಾಯಣಗೌಡ ಹುಟ್ಟುಹಬ್ಬ ಆಚರಣೆ
ಟೇಕಲ್: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ವತಿಯಿಂದ ಟೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿನ ಹೊರರೋಗಿಗಳಿಗೆ ನಾರಾಯಣಗೌಡರ 48ನೇ ಹುಟ್ಟುಹಬ್ಬದ ಅಂಗವಾಗಿ ಉಚಿತವಾಗಿ ಹಾಲು, ಬ್ರೆಡ್ ಹಾಗೂ ಹಣ್ಣುಗಳನ್ನು ಕರವೇ ಕಾರ್ಯಾಧ್ಯಕ್ಷ ಉಳ್ಳೇರಹಳ್ಳಿ ಮಂಜುನಾಥಗೌಡರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ಅವರು ಈ ಸಂದರ್ಭದಲ್ಲಿ ಮಾತನಾಡಿ, ನಾರಾಯಣ ಗೌಡರು ಕನ್ನಡ ನಾಡು, ನುಡಿಯ ರಕ್ಷಣೆಗಾಗಿ ರಾಜ್ಯಾದ್ಯಂತ ಹಲವಾರು ಪ್ರತಿಭಟನೆಗಳನ್ನು ಮಾಡಿ ಗಡಿ, ನದಿ ವಿಷಯಗಳಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕರವೇಯ ಉಳ್ಳೇರಹಳ್ಳಿ ವೆಂಕಟೇಶ್, ಟೇಕಲ್ ಘಟಕದ ಗೋವಿಂದಸ್ವಾಮಿ (ಗೋವರ್ದನ್), ಡಾ. ಪ್ರಕಾಶ್, ಕೆ.ಡಿ.ಎಸ್.ಎಸ್.ನ ತಾಲ್ಲೂಕು ಅಧ್ಯಕ್ಷ ನಾಗರಾಜ್, ಖಯೂಂ ಪಾಷ ಉಪಸ್ಥಿತರಿದ್ದರು.
ಮಾನವೀಯ ಮೌಲ್ಯ, ಒಳ್ಳೆ ಸಂಸ್ಕಾರ ಬೆಳೆಸಿ
ಚಿಕ್ಕಬಳ್ಳಾಪುರ: ಜೀವನವನ್ನು ಉಜ್ವಲಗೊಳಿಸುವ ಶಕ್ತಿಯು ವಿದ್ಯೆಗಿದೆ. ಇದನ್ನರಿತುಕೊಂಡು ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಮುಂದಾಗಬೇಕೆಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು. ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಆಂಗ್ಲ ಶಾಲೆಯಲ್ಲಿ ನರ್ಸರಿ ಮಕ್ಕಳಿಗಾಗಿ ಆಯೋಜಿಸಿದ್ದ ಜ್ಞಾನಾಂಕುರ (ಅಕ್ಷರಾಭ್ಯಾಸ) ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ಪೋಷಕರು ಮಕ್ಕಳಿಗೆ ನೀಡಬೇಕಾದ ನಿಜವಾದ ಆಸ್ತಿ ವಿದ್ಯೆ. ಚಿಕ್ಕಂದಿನಿಂದಲೇ ಒಳ್ಳೆಯ ವಾತಾವರಣದಲ್ಲಿ ಮಕ್ಕಳನ್ನು ಬೆಳೆಸಬೇಕು. ಮಾನವೀಯ ಮೌಲ್ಯ, ಸಂಸ್ಕಾರ ಸೇರಿದಂತೆ ಸದ್ಗುಣಗಳನ್ನು ಅವರು ಮೈಗೂಢಿಸಿಕೊಳ್ಳುವಂತೆ ಮಾಡಬೇಕು. ಇಂತಹ ಕೆಲಸವಾದಾಗ ಉತ್ತಮ ಸಮಾಜವನ್ನು ಕಾಣಲು ಸಾಧ್ಯವಾಗುತ್ತದೆ ಎಂದರು. ಉತ್ತಮ ಆರೋಗ್ಯ ಹೊಂದಿರುವಂತಹ, ಗುಣಮಟ್ಟದ ಶಿಕ್ಷಣವನ್ನು ಹೊಂದಿರುವಂತಹವರು ನಿರೀಕ್ಷಿತ ಗುರಿಯನ್ನು ಮುಟ್ಟಲು ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಮುಖವಾಗಿ ಒತ್ತು ಕೊಡಬೇಕೆಂದು ಕರೆ ನೀಡಿದರು. ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರ ಎನ್. ಶಿವರಾಮರೆಡ್ಡಿ ಮಾತನಾಡಿ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಂತೆ ಅದಿಚುಂಚನಗಿರಿ ಮಠವು ಶೈಕ್ಷಣಿಕ, ಧಾರ್ಮಿಕ, ಆರೋಗ್ಯ, ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬರುತ್ತಿದೆ.ಮಕ್ಕಳಿಗೆ ಮಾನವೀಯ ಮೌಲ್ಯ, ಧಾರ್ಮಿಕ, ಸಂಸ್ಕಾರಯುತ ಶಿಕ್ಷಣವನ್ನು ಕೊಡಿಸುತ್ತಿರುವುದು ಇದರ ವಿಶೇಷವಾಗಿದೆ ಎಂದರು. ಆದಿಚುಂಚನ ಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ, ಮುಖಂಡರಾದ ಜಿ.ಆರ್. ನಾರಾಯಣಸ್ವಾಮಿ, ಕೆ.ವಿ.ನಾಗರಾಜ್, ಡಾ.ಬುಲ್ ಬುಲೇ, ಮುಖ್ಯಶಿಕ್ಷಕ ಮೋಹನ್ ಕುಮಾರ್ಮುಂತಾದವರು ಉಪಸ್ಥಿತರಿದ್ದರು.
ಸನ್ಮಾನ
ಚಿಂತಾಮಣಿ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ 48ನೇ ಹುಟ್ಟು ಹಬ್ಬದ ಅಂಗವಾಗಿ ಕ್ರೀಡಾಪಟು ಮಂಜುನಾಥ್ ಅವರಿಗೆ ನೆನಪಿನ ಕಾಣಿಕೆ ನೀಡಿ ಕರವೇ ಜಿಲ್ಲಾಧ್ಯಕ್ಷ ಎಂ.ಆರ್.ಲೋಕೇಶ್ ಸನ್ಮಾನಿಸಿದರು. ಈ ವೇಳೆ, ಎಂ.ಆರ್.ಲೋಕೇಶ್ ಮಾತನಾಡಿದರು. ತಾಲೂಕು ಅಧ್ಯಕ್ಷ ಎನ್.ಅಂಬರೀಷ್, ಕರವೇ ಮುಖಂಡರಾದ ಶ್ರೀನಿವಾಸ್, ನಾರಾಯಣಸ್ವಾಮಿ, ಮಾ.ಷ.ಚಂದ್ರಶೇಖರ್, ನಾಗರಾಜ್, ಆನಂದ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

