ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಸ್ಪಂದನ
ಚಿಂತಾಮಣಿ: ತಾಲೂಕಿನ ದೊಡ್ಡಬೊಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ ಎಸ್ಸೆಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ರಂಗಯ್ಯ ಅವರು, ಪ್ರತಿಭೆ ಯಾರ ಒಬ್ಬರ ಸ್ವತ್ತಲ್ಲ. ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ಯಾವುದೇ ಪರೀಕ್ಷೆಗಳನ್ನು ಪಾಸು ಮಾಡಬಹುದು ಎಂದು ತಿಳಿಸಿದರು. ಪ್ರವಚನಕಾರ ತಳಗವಾರ ಟಿ.ಎಲ್.ಆನಂದ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಮುಖ್ಯ ಶಿಕ್ಷಕ ಎಸ್.ಎಂ.ರಾಘವೇಂದ್ರ ಶಾಲೆಯಲ್ಲಿ ಓದುತ್ತಿರುವ ಬಡಮಕ್ಕಳ ಕುರಿತು ಮಾತನಾಡಿದರು. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳಾದ ಚೌಡರೆಡ್ಡಿ ಮತ್ತು ಜಯಂತಿ ತಮ್ಮ ಅನಿಸಿಕೆಗಳನ್ನು ಹೇಳಿದರು. ಕಾರ್ಯಕ್ರಮದಲ್ಲಿ ರೇಷ್ಮೆಕೃಷಿ ವಿವಿ ಪ್ರೊ. ವಿಜಯೇಂದ್ರ, ಮಾಡಿಕೆರೆ ಅರುಣ್ಬಾಬು, ಜನಾರ್ದನ್ ರೆಡ್ಡಿ, ದೊಡ್ಡಗಂಜೂರು ನಾಗಭೂಷಣಾಚಾರಿ, ಮುನಿರೆಡ್ಡಿ, ಶಿವಣ್ಣ, ಮುನಿಶ್ಯಾಮಿ, ಮಂಜು, ಶಿವಾರೆಡ್ಡಿ, ಮೈಲಾಂಡ್ಲಹಳ್ಳಿ ಅಶ್ವತ್ಥನಾರಾಯಣಪ್ಪ, ನಾರಾಯಣಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಶಾಲೆಯ ಎಲ್ಲ ಶಿಕ್ಷಕರು ಭಾಗವಹಿಸಿದ್ದರು.
ಲಾರಿ ಮಾಲೀಕರಿಂದ ಹಣ ವಸೂಲಿ
ಚಿಂತಾಮಣಿ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ಸರಕು ಸಾಗಾಣೆ ಲಾರಿಯನ್ನು ತಡೆದ ಗುಂಪೊಂದು ಹಣಕ್ಕಾಗಿ ಪೀಡಿಸಿ ಹಣ ಪಡೆದು ಲಾರಿಯನ್ನು ಬಿಡುಗಡೆಗೊಳಿಸಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಟಮಾಚನಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಚಿನ್ನಸಂದ್ರ ಗ್ರಾಮಕ್ಕೆ ಸೇರಿದ ವ್ಯಕ್ತಿಯೊಬ್ಬರು ಲಾರಿಯಲ್ಲಿ ಕಸಾಯಿಖಾನೆಗೆ ದನಕರುಗಳನ್ನು ಸಾಗಿಸುತ್ತಿದ್ದಾರೆಂದು ಆರೋಪಿಸಿ ಅಲ್ಲದೆ ಸಂಘಟನೆಯೊಂದರ ಹೆಸರು ಬಳಿಸಿಕೊಂಡ ಗುಂಪೊಂದು, ಲಾರಿ ಮಾಲೀಕರಿಂದ 35 ಸಾವಿರ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಸಿದಂತೆ ಗ್ರಾಮಾಂತರ ಠಾಣೆಯ ಪೊಲೀಸರಿಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಅಪಘಾತ: ವ್ಯಕ್ತಿ ಸಾವು
ಚಿಂತಾಮಣಿ: ಗ್ರಾಮಾಂತರ ಠಾಣೆ ವ್ಯಾಪ್ತಿಯ ಮೈಲಾಂಡ್ಲಹಳ್ಳಿ ಗೇಟ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಮಹಿಳೆಯೊಬ್ಬಳು ಗಾಯಗೊಂಡ ಘಟನೆ ನಡೆದಿದೆ. ನಗರದ ಪಿಸಿಆರ್ ಕಾಂಪ್ಲೆಕ್ನ ಮಾರುತಿ ಎಲೆಕ್ಟ್ರಿಕಲ್ ಅಂಗಡಿಯ ಮಾಲೀಕ ಕಾರ್ಯನಿಮಿತ ಕೋಲಾರಕ್ಕೆ ಹೋಗಿ ಹಿಂತಿರುಗಿ ಸ್ವಗ್ರಾಮವಾದ ತಾಲ್ಲೂಕಿನ ಆಲಂಬಗಿರಿ ಗ್ರಾಮಕ್ಕೆ ಹೋಗುತ್ತಿರುವಾಗ ಈ ಟಾಟಾ ಸುಮೋ ಡಿಕ್ಕಿ ಹೊಡೆದಿದೆ. ಮೃತನನ್ನು ವೆಂಕಟೇಶಪ್ಪ(40) ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

