12 ಪ್ರಕರಣಗಳ ಇತ್ಯರ್ಥ: ಡಿಸಿ
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 7 ರ ಅಗಲೀಕರಣ ಮತ್ತು ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ರೈತರು ಭೂಮಿಯನ್ನು ಕಳೆದುಕೊಂಡು ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಿಸಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಜೂ.6 ರಂದು 12 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್ . ವಿಶಾಲ್ ತಿಳಿಸಿದ್ದಾರೆ. ಭೂ ಸ್ವಾಧೀನವಾಗಿರುವ ಪ್ರಕ್ರಿಯೆಯಲ್ಲಿ ಭೂಮಿ ಕಳೆದುಕೊಂಡ ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿ ತಾಲೂಕುಗಳ ವಿವಿಧ ಗ್ರಾಮಗಳ ರೈತರು ಹೆಚ್ಚುವರಿ ಪರಿಹಾರ ಕೋರಿ ಸಲ್ಲಿಸಿ ಒಟ್ಟು 362 ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಿಸಿದ್ದರು.ಇದರಲ್ಲಿ 2013 ರ ಅ.11 ರಿಂದ 2014 ರ ಮೇ.30 ರವರೆಗೆ ಒಟ್ಟು 338 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು ಉಳಿಕೆಯಾಗಿದ್ದಂತಹ 24 ಪ್ರಕರಣಗಳಲ್ಲಿ 12 ಪ್ರಕರಣಗಳನ್ನು ಜೂ.6 ರಂದು ಇತ್ಯರ್ಥಪಡಿಸಲಾಗಿದೆ. ಉಳಿಕೆ ಪ್ರಕರಣಗಳನ್ನು ಇನ್ನೂ 1 ತಿಂಗಳೊಳಗೆ ಕಾನೂನು ರೀತಿಯಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಬಸ್ ಪಾಸ್ ವಿತರಣೆ
ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2014-15ನೇ ಸಾಲಿಗಾಗಿ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದ್ದು ಮೊದಲನೇ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ಜೂ.5 ರಿಂದ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ನಿಗಧಿತ ಶುಲ್ಕದೊಂದಿಗೆ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸಲ್ಲಿಸಿ ಬಸ್ ಪಾಸ್ಗಳನ್ನು ಪಡೆದುಕೊಳ್ಳಬಹುದು. ಶೈಕ್ಷಣಿಕ ಸಂಸ್ಥೆಯಿಂದ ಮತ್ತು ವಾಸ ಸ್ಥಳಕ್ಕೆ 60 ಕಿ.ಮೀ. ಗರಿಷ್ಠ ಅಂತರವಿರುವ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಿಸಲಾಗುತ್ತಿದೆ ಎಂದು ಕ.ರಾ.ರ.ಸಾ. ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

