ರೋಗ ಹರಡುವ ಮುನ್ನವೇ ಮುಂಜಾಗ್ರತೆ ವಹಿಸಿ: ಜಬೀನ್ ತಾಜ್
ಚಿಕ್ಕಬಳ್ಳಾಪುರ: ಸಾಂಕ್ರಾಮಿಕ ರೋಗಗಳು ಹರಡಿ ಅನಾಹುತಗಳು ಉಂಟಾಗುವ ಮುಂಚೆಯೇ ಎಚ್ಚೆತ್ತುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂದಾಗಬೇಕೆಂದು ನಗರಸಭಾ ಉಪಾಧ್ಯಕ್ಷ ಜಬೀನ್ ತಾಜ್ ಸಾರ್ವಜನಿಕರಿಗೆ ಸಲಹೆ ನೀಡಿದರು. ನಗರದ ಶಾಂತಿನಗರ ವಾರ್ಡಿನಲ್ಲಿ ಸಾಂಕ್ರಾಮಿಕ ರೋಗಗಳು ನಿಯಂತ್ರಣಕ್ಕಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನೈರ್ಮಲ್ಯ ಹದಗೆಟ್ಟರೆ ಸುಲಭವಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಇದರಿಂದ ಬಹಳಷ್ಟು ಅನಾರೋಗ್ಯಕ್ಕೆ ಗುರಿಯಾಗಿ ಎಲ್ಲಾ ರೀತಿಯಲ್ಲೂ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಇದಕ್ಕೆ ಮೊದಲೇ ಎಚ್ಚೆತ್ತುಕೊಳ್ಳುವುದು ಅಗತ್ಯ ಎಂದರು. ಪ್ರಸ್ತುತ ಮಳೆ ಬೀಳುತ್ತಿರುವುದರಿಂದ ಬಹುತೇಕ ಕಡೆ ನೀರು ನಿಂತುಕೊಂಡಿರುತ್ತದೆ. ಇದು ಸೊಳ್ಳೆಗಳ ಉತ್ಪತ್ತಿ ಹೆಚ್ಚಳಕ್ಕೆ ಬಹುಮುಖ್ಯ ಕಾರಣವಾಗಲಿದ್ದು ಸೊಳ್ಳೆಗಳು ಕಡಿತದಿಂದ ಡೆಂಘಿ, ಮಲೇರಿಯಾ, ಚಿಕೂನ್‌ಗುನ್ಯಾ ರೋಗಗಳು ಬರುತ್ತವೆ. ಈ ಹಿನ್ನೆಲೆಯಲ್ಲಿ ಸೊಳ್ಳೆಗಳ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.
ತಾಲೂಕು ಹಿರಿಯ ಆರೋಗ್ಯ ನಿರೀಕ್ಷಕ ತೇಜಸ್ ಕೃಷ್ಣಮೂರ್ತಿ ಮಾತನಾಡಿ, ತಮ್ಮ ತಮ್ಮ ಮನೆಗಳ ಜೊತೆಗೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿದಾದಾಗ ಬಹಳಷ್ಟು ಕಾಯಿಲೆಗಳು ಹರಡುವುದನ್ನು ತಪ್ಪಿಸಬಹುದಾಗಿದೆ. ಇದಕ್ಕೆ ಸಕಾಲದಲ್ಲಿ ತ್ಯಾಜ್ಯ ವಿಲೇವಾರಿ, ಚರಂಡಿಗಳಲ್ಲಿ ಸರಾಗವಾಗಿ ಹರಿಯುವಂತೆ ನೋಡಿಕೊಳ್ಳುವುದು ಮುಖ್ಯ ಎಂದ ಅವರು, ನಗರಸಭೆ ಮತ್ತು ಆರೋಗ್ಯ ಇಲಾಖೆಯಿಂದ ಸ್ವಚ್ಛತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

