ಸಾಮೂಹಿಕ ಪಾದಯಾತ್ರೆ
ಚಿಂತಾಮಣಿ: ನಗರದ ಆಜಾದ್ ಚೌಕ ಶ್ರೀ ಹರಿಹರೇಶ್ವರಸ್ವಾಮಿ ದೇವಾಲಯದಿಂದ ಜುಲೈ 13 ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ಚಿಂತಾಮಣಿಯಿಂದ ತಿರುಪತಿ ತಿರುಮಲ 6 ನೇ ವರ್ಷದ ಸಾಮೂಹಿಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಯಲ್ಲಿ ಮಹಿಳೆಯರು ಹಾಗೂ ಪಾದಯಾತ್ರಿಗಳಿಗೆ ಬೆಳಗಿನ ತಿಂಡಿ, ಕಾಫಿ, ಮಧ್ಯಾಹ್ನ ಊಟ, ರಾತ್ರಿ ಊಟ ಉಚಿತವಾಗಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಾದಯಾತ್ರೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಪಿ.ಶ್ರೀನಾಥ್ 9448180108, ಕೆ.ಪಿ.ಶ್ರೀನಿವಾಸ್ 9845727342 ಅವರನ್ನು ಸಂಪರ್ಕಿಸಬಹುದು.
ತಂಬಾಕು ನಿಷೇಧ: ಪೊಲೀಸರಿಂದ ಜಾಗೃತಿ
ಕೆಜಿಎಫ್: ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ಕೋಟ್ಪಾ ಕಾಯ್ದೆಯಡಿ ತಂಬಾಕು ನಿಷೇಧದ ಬಗ್ಗೆ ಚಾಂಪಿಯನ್ರೀಫ್ ವ್ಯಾಪ್ತಿಯ ಜಿವಿಐಟಿ ಕಾಲೇಜು ಆವರಣದಲ್ಲಿ ಹಾಗೂ ಮಾರಿಕುಪ್ಪಂ ವ್ಯಾಪ್ತಿಯ ಕೆಂಪಾಪುರ ಗ್ರಾಮದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ, ಗೃಹ ಇಲಾಖೆಯ ನೋಡಲ್ ಸಂಸ್ಥೆಯ ಸಂಪನ್ಮೂಲ ಅಧಿಕಾರಿ ಪರುಶುರಾಮ್ ಅವರು ಮಾತನಾಡಿ, ತಂಬಾಕಿನಿಂದಾಗುವ ಅಪಾಯಗಳ ಬಗ್ಗೆ ಎಚ್ಚರಿಸಿದರು. ಕಾರ್ಯಕ್ರಮದಲ್ಲಿ ಚಿಲ್ಲರೆ ವ್ಯಾಪಾರಿಗಳು, ಹೊಟೇಲ್, ಬಾರ್ ಮಾಲೀಕರು, ವಿದ್ಯಾಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.
ಹಲವಡೆ ರಸ್ತೆ ಗುಣಮಟ್ಟ
ಪ್ರಯೋಗಾಲಯ ಸ್ಥಾಪನೆ
ಕ.ಪ್ರ.ವಾರ್ತೆ ್ಣ ಕೋಲಾರ ್ಣ ಜೂ.10
ರಸ್ತೆಗಳ ಗುಣಮಟ್ಟ ಪರೀಕ್ಷೆಗಾಗಿ ಶಿವಮೊಗ್ಗ ಜಿಲ್ಲೆಯ ಮಾದರಿಯಲ್ಲಿ ಲೋಕೋಪಯೋಗಿ ಇಲಾಖೆಯ 35 ಉಪ ವಿಭಾಗದಲ್ಲಿ ರಸ್ತೆ ಗುಣಮಟ್ಟ ಪರೀಕ್ಷಾ ಪ್ರಾಯೋಗಾಲಯಗಳನ್ನು ಸ್ಥಾಪಿಸಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಕೋಲಾರ ಜಿಪಂ ಸಭಾಂಗಣದಲ್ಲಿ ಮಂಗಳವಾರ ಸಂಜೆ ಸುದ್ದಿಗಾರರ ಜತೆ ಮಾತನಾಡಿದ ಅವರು, ರಸ್ತೆಗಳ ಗುಣಮಟ್ಟದ ಪರೀಕ್ಷೆಗಾಗಿ ಶಿವಮೊಗ್ಗ ಹೊರತು ಪಡಿಸಿ ರಾಜ್ಯದ ಬೇರೆ ಯಾವುದೇ ಉಪ ವಿಭಾಗದಲ್ಲಿ ಪ್ರಾಯೋಗಾಲಯವಿಲ್ಲ. ರಸ್ತೆಗಳ ಕಾಮಗಾರಿಗಳ ಬಗ್ಗೆ ಜನತೆಯಿಂದ ಕೇಳಿ ಬಂದ ದೂರಿನ ಹಿನ್ನಲೆಯಲ್ಲಿ ಗುಣಮಟ್ಟ ಪರೀಕ್ಷೆಯ ಪ್ರಾಯೋಗಾಲಯವನ್ನು ಇನ್ನು ಆರು ತಿಂಗಳಲ್ಲಿ ರಾಜ್ಯದ ಎಲ್ಲಾ ಉಪ ವಿಭಾಗದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ರಸ್ತೆ ಅಭಿವೃದ್ಧಿ: ರಾಜ್ಯದ ಅಭಿವೃದ್ಧಿಗಾಗಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆ ಹೆಚ್ಚು ಒತ್ತು ನೀಡುತ್ತಿದೆ. ಮಂಗಳೂರಿನಿಂದ ವಯಾ ಶಿರಾ, ಮಧುಗಿರಿ, ಗೌರಿಬಿದನೂರು,ಚಿಕ್ಕಬಳ್ಳಾಪುರ, ಚಿಂತಾಮಣಿ, ಶ್ರೀನಿವಾಸಪುರ, ಮುಳಬಾಗಲು ಮೂಲಕ ವಿ.ಕೋಟೆಯವರೆಗೆ ಎನ್ಎಚ್ 234ರಲ್ಲಿ 159 ಕಿಮೀ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಇದರಿಂದ ಬೆಂಗಳೂರು-ಮೈಸೂರು ವಿಭಾಗದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಸಹಾಯವಾಗಲಿದೆ ಎಂದು ತಿಳಿಸಿದರು. ಬೆಂಗಳೂರು ವೃತ್ತ ವ್ಯಾಪ್ತಿಯ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ 1768 ಕೋಟಿ ಖರ್ಚು ಮಾಡಲಾಗುತ್ತದೆ. ರಾಜ್ಯ ಹೆದ್ದಾರಿಗಳಿಗೆ 20 ಸಾವಿರ ಕೋಟಿ, ಎಂ.ಡಿ.ಆರ್ ರಸ್ತೆಗಳಿಗೆ 49 ಸಾವಿರ ಕೋಟಿ ವಿನಿಯೋಗಿಸಲಾಗುತ್ತಿದೆ. ಈ ಪೈಕಿ ಬೆಂಗಳೂರು ವೃತ್ತಕ್ಕೆ ಸೇರಿದ ಜಿಲ್ಲೆಗಳಿಗೆ 10 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

