ಮರಳು ಲೂಟಿ ಅವ್ಯಾಹತ: ಕಣ್ಮುಚ್ಚಿರುವ ಆಡಳಿತ
ಬಂಗಾರಪೇಟೆ: ತಾಲೂಕಿನಲ್ಲಿ ವ್ಯಾಪಕವಾಗಿ ಅಕ್ರಮ ಮರಳು ಲೂಟಿ ನಡೆಯುತ್ತಿದ್ದರೂ ತಾಲೂಕು ಆಡಳಿತ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿರುವುದು ಸರಿಯಿಲ್ಲ. ಈ ಕೂಡಲೆ ಮರಳು ಲೂಟಿಕೋರರನ್ನು ತಡೆದು ಅಂತರ್ಜಲ ರಕ್ಷಿಸಬೇಕೆಂದು ಆಗ್ರಹಿಸಿ ನವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲೂಕು ಆಡಳಿತಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.
ಮೊದಲೇ ತಾಲೂಕು ಬರದಿಂದ ತತ್ತರಿಸಿ ಹೋಗಿದೆ. ಎಲ್ಲಾ ಕೆರೆಗಳು ಒಣಗಿ ಮಕ್ಕಳ ಆಟದ ಮೈದಾನಗಳಾಗಿ ಮಾರ್ಪಟ್ಟಿದೆ ಇದನ್ನೇ ಕೆಲವು ಮರಳು ಮಾಫಿಯಾದವರು ಉಪಯೋಗಿಸಿಕೊಂಡು ಕೆರೆಗಳಲ್ಲಿ ಸಮೃದ್ಧವಾಗಿ ಸಿಗುವ ಮರಳನ್ನು ಯಾವುದೇ ಅಂಜಿಕೆ ಇಲ್ಲದೆ ಹಗಲಲ್ಲೇ ಲಾರಿಗಳಲ್ಲಿ ತುಂಬಿಕೊಂಡು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರೂ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು. ಇದರಿಂದ ಅಂತರ್ಜಲ ಮಟ್ಟಷ್ಟು ಪಾತಾಳಕ್ಕೆ ಹೋಗುವಂತಾಗಿದೆ. ಮತ್ತೊಂದು ಕಡೆ ದೀರ್ಘಕಾಲ ಬಾಳಿಕೆ ಬರಬೇಕಾದ ರಸ್ತೆಗಳು ಮರಳು ಲಾರಿಗಳ ಸಂಚಾರ ದಟ್ಟಣೆ ಹೆಚ್ಚಾಗಿರುವುದರಿಂದ ಲೋಕೋಪಯೋಗಿ ಇಲಾಖೆ ರಸ್ತೆಗಳು ಬಹುಬೇಗನ ಹಾಳಾಗುತ್ತಿದೆ ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ.
ತಾಲೂಕು ಆಡಳಿತ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕದಿದ್ದರೆ ನಮ್ಮ ಸಂಘಟನೆ ಕಾರ್ಯಕರ್ತರೇ ಮರಳು ದಂಧೆ ನಡೆಯುವ ಸ್ಥಳಗಳಿಗೆ ನುಗ್ಗಿ ದಾಳಿ ಮಾಡಿ ಜಿಲ್ಲಾಧಿಕಾರಿಗಳಿಗೆ ಒಪ್ಪಿಸಲಾಗುವುದು ಇದು ನಡೆಯಬಾರದು ಎಂದಿದ್ದರೆ ಕೂಡಲೆ ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ ಉಷಾರವರಿಗೆ ನೀಡಿರುವ ಮನವಿ ಪತ್ರದಲ್ಲಿ ಎಚ್ಚರಿಸಿದ್ದಾರೆ. ಈ ವೇಳೆ ಸಂಘಟನೆ ರಾಜ್ಯಾದ್ಯಕ್ಷ ರಾಜಗೋಪಾಲ್, ಜಿಲ್ಲಾಧ್ಯಕ್ಷ ಚಿನ್ನಿವೆಂಕಟೇಶ್, ಉಪಾಧ್ಯಕ್ಷ ಕೆ.ಸಿ. ಗೋಪಾಲ್, ಜೋಗಿ, ಸುಮಂತ್, ಸುರೇಶ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

