ಕೋಲಾರ

ರೈತ ಸಂಘ ಪ್ರತಿಭಟನೆ

Published On :

ಬಂಗಾರಪೇಟೆ: ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತಾಲೂಕಿನ 37 ಗ್ರಾಪಂಗಳಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂದು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಪಂ ಕಚೇರಿ ಎದುರು ಪ್ರತಿಭಟಿಸಿದರು. ಪಂಚಾಯ್ತಿಗಳಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಿಗಳು ಯೋಜನೆಗಳನ್ನು ರೂಪಿಸಿದ್ದಾರೆ. ಇದನ್ನು ಪರಿಶೀಲಿಸಲು ಬಂದ ಕೇಂದ್ರ ತಂಡ ಕೇವಲ 2 ಪಂಚಾಯಿತಿಗಳ ಕಡತಗಳನ್ನು ಪರಿಶೀಲಿಸಿ, ಎಲ್ಲವೂ ಸರಿಯಾಗಿದೆ ಎಂಬ ವರದಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆಂದು ಆರೋಪಿಸಿದರು. ಪ್ರತಿಭಟನೆಯ ನೇತೃತ್ವವನ್ನು ತಿಮ್ಮಾಪುರ ನಾಗರಾಜ್, ತೊರಗನದೊಡ್ಡಿ, ಮಂಜುನಾಥ್, ಶ್ರೀನಿವಾಸ್, ಉದಯಕುಮಾ, ಸೀನಪ್ಪ, ಅಮರೇಶ್, ನಾರಾಯಣಸ್ವಾಮಿ, ರಾಘವೇಂದ್ರ, ಬಿ.ನಾಗರಾಜ್, ಜಗದೀಶ್.ಎಂ., ಸತೀಶ್, ಜಯರಾಮ್, ವೆಂಕಟೇಶ್‌ಗೌಡ, ವೆಂಕಟರಾಘವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.