ಕೋಲಾರ

ಜೆಡಿಎಸ್‌ನ ಚೌಡರೆಡ್ಡಿ ಗೆಲ್ಲಿಸಲು ಮನವಿ

Published On :

ಚಿಂತಾಮಣಿ: ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ತೂಪಲ್ಲಿ ಚೌಡೆರೆಡ್ಡಿ ಅವರಿಗೆ ಹೆಚ್ಚಿನ ಬಹುಮತ ನೀಡಿ ಗೆಲ್ಲಿಸಬೇಕು ಎಂದು ಜಿಪಂ ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು. ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾಜಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ನಾರಾಯಣರೆಡ್ಡಿ, ಪ್ರಾಂಶುಪಾಲ ನಾರಾಯಣರೆಡ್ಡಿ, ತಾಲ್ಲೂಕು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮಂಜುನಾಥ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕಾಳಪ್ಪ, ಉಪನ್ಯಾಸಕರಾದ ಮಂಜುನಾಥರೆಡ್ಡಿ, ಮುನಿರೆಡ್ಡಿ, ಚಂದ್ರಶೇಖರರೆಡ್ಡಿ ಮುತುರೆಡ್ಡ್ತಿ, ಓಬಯ್ಯ, ಜಿ.ಎಂ.ಶ್ರೀನಿವಾಶ್, ರೆಡ್ಡೆಪ್ಪ, ರಾಮದಾಸ್ ಸೇರಿ ಹಲವಾರು ಶಿಕ್ಷಕರು ಉಪಸ್ಥಿತರಿದ್ದರು.

ಸಿದ್ದು ಜನಪರ ಆಡಳಿತವೇ ನನ್ನ ಗೆಲವಿಗೆ ಶ್ರೀರಕ್ಷೆ

ಮಾಲೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಜನಪರ ಆಡಳಿತವೇ ನನ್ನ ಗೆಲುವಿಗೆ ಶ್ರೀ ರಕ್ಷೆ. ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರವು ಕಾಂಗ್ರೆಸ್ ಪಾಲಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಪ್ರೊ.ಸಿ.ಎಚ್. ಮುರಿಗೇಂದ್ರಪ್ಪ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಆರೋಪಗಳಲ್ಲಿ ನನಗೆ ನಂಬಿಕೆ ಇಲ್ಲ. ನನ್ನ ಸೇವೆಯ ಮೇಲೆಯೇ ನನಗೆ ನಂಬಿಕೆ. ಜಿಲ್ಲೆಯಲ್ಲಿ ಉತ್ತಮ ವಾತವರಣ ಕಂಡು ಬಂದಿದೆ. ನನ್ನನ್ನು ಈ ಬಾರಿ ಚುನಾಯಿಸಿದರೆ ಕೋಲಾರ-ಚಿಕ್ಕಬಳ್ಳಾಪುರ ವಲಯಕ್ಕಾಗಿ ಪ್ರತ್ಯೇಕ ವಿವಿ ಪ್ರಾರಂಭಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆನ್ನರಾಯಪ್ಪ, ಮುನಿರಾಜು, ಚೆನ್ನಕೇಶವ, ರಘುನಾಥ್, ಅಂಜನಿ ಸೋಮಣ್ಣ, ಅಶ್ವತ್ಥರೆಡ್ಡಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.