ಕೋಲಾರ

ಕೆಂಪೇಗೌಡರ ಜಯಂತಿ ಇಂದು

Published On :

ಕೋಲಾರ: ಬೆಂಗಳೂರು ನಿರ್ಮಾಪಕ ನಾಡಪ್ರಭು ಕೆಂಪೇಗೌಡರ 504ನೇ ಜಯಂತ್ಯುತ್ಸವವನ್ನು ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದಿಂದ ಜೂ.14 ರ ಶನಿವಾರ ಸಂಜೆ 4.30ಕ್ಕೆ ಹಮ್ಮಿಕೊಳ್ಳಲಾಗಿದೆ.
ನಗರದ  ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸುವರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ವಿ. ಶಂಕರಪ್ಪ ಅಧ್ಯಕ್ಷತೆ ವಹಿಸುವರು. ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಪೀಠಾಧ್ಯಕ್ಷ ನಂಜಾವದೂತ ಸ್ವಾಮೀಜಿ ಭಾಗವಹಿಸಲಿದ್ದು, ಸಚಿವ ಕೃಷ್ಣಬೈರೇಗೌಡ, ಮಾಜಿ ಶಾಸಕ ಶ್ರೀನಿವಾಸಗೌಡ, ಎಂಎಲ್‌ಸಿ ವೈ.ಎ. ನಾರಾಯಣಸ್ವಾಮಿ, ಶಾಸಕ ಕೆ.ಎಸ್. ಮಂಜುನಾಥಗೌಡ, ಅಪ್ಪಾಜಿಗೌಡ, ನಾಗರಾಜ್, ಬಿಸಪ್ಪಗೌಡ, ವಕ್ಕಲೇರಿ ರಾಮು, ರಮೇಶ್, ಸತೀಶ್, ರಾಮಚಂದ್ರ ಮೊದಲಾದವರು ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾಯಿತರಾದ ನೂತನ ನಿರ್ದೇಶಕರನ್ನು ಅಭಿನಂದಿಸಲಾಗುವುದು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗುವ ನಾಡ ಪ್ರಭು ಕೆಂಪೇಗೌಡ ಜಯಂತ್ಯುತ್ಸವ ಪಲ್ಲಕ್ಕಿಗಳ ಮೆರವಣಿಗೆಯನ್ನು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಾಮಚಂದ್ರ ಉದ್ಘಾಟಿಸುವರು ಎಂದು ಪ್ರಧಾನ ಕಾರ್ಯದರ್ಶಿ ಕೆ.ಎ.ಜೆ ಮೌನಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.