ಉದ್ಯೋಗ ಕಲ್ಪಿಸಲು ರಾಜ್ಯ ಸರ್ಕಾರ ವಿಫಲ
ಬಾಗೇಪಲ್ಲಿ: ಬಾಗೇಪಲ್ಲಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ನರಸಿಂಹ ನಾಯ್ಡು ಆರೋಪಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸುಮಾರು ವರ್ಷಗಳಿಂದ ಈ ಕ್ಷೇತ್ರದಿಂದ ಆಯ್ಕೆಯಾಗಿರುವಂತಹ ವಿಧಾನ ಪರಿಷತ್ ಸದಸ್ಯರು ಪದವೀಧರರ ಜ್ವಲಂತ ಸಮಸ್ಯೆಗಳ ಬಗ್ಗೆ ಚಕಾರವೆತ್ತಿಲ್ಲ. ಇಂತಹವರನ್ನು ಮತ್ತೆ ಆಯ್ಕೆ ಮಾಡುವುದರಲ್ಲಿ ಅರ್ಥವಿರುವುದಿಲ್ಲ ಎಂದರು.
ಎಚ್ಡಿಕೆ ಪ್ರಯತ್ನ: ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಶಿಕ್ಷಕರು ಸೇರಿದಂತೆ ಸಾವಿರಾರು ನಿರುದ್ಯೋಗಿ ಪದವೀಧರರಿಗಾಗಿ ಸರ್ಕಾರಿ ಹುದ್ದೆಗಳನ್ನು ಸೃಷ್ಟಿಸಿ ಉದ್ಯೋಗ ಕಲ್ಪಿಸಿರುವುದರ ಜೊತೆಗೆ ನಿರುದ್ಯೋಗಿ ಪದವೀಧರರ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಿದ್ದಾರೆ ಎಂದರು.
2008 ರಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಮತ್ತು 2012 ರಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿರುವ ಆರ್. ಚೌಡರೆಡ್ಡಿ ತೂಪಲ್ಲಿಯವರು ಕಳೆದ 10 ವರ್ಷಗಳಿಂದ ನಿರುದ್ಯೋಗಿ ಪದವೀಧರರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಎರಡು ಬಾರಿ ಸೋತಿರುವ ಅವರ ಬಗ್ಗೆ ಈ ಕ್ಷೇತ್ರದಲ್ಲಿ ಅನುಕಂಪದ ಅಲೆ ಇದೆ ಎಂದರು.
ಜೆಡಿಎಸ್ ಮುಖಂಡರಾದ ಸಿ.ಡಿ. ಗಂಗುಲಪ್ಪ, ಮಾಜಿ ಪುರಸಭೆ ಸದಸ್ಯ ನೂರುಲ್ಲಾ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಸದಾಶಿವರೆಡ್ಡಿ, ರಾಮಕೃಷ್ಣಪ್ಪ, ಅಶ್ವತ್ಥ್ ರೆಡ್ಡಿ, ರಮೇಶ್ ಬಾಬು, ಸೂರ್ಯನಾರಾಯಣ ರೆಡ್ಡಿ, ಓಬಳ ರೆಡ್ಡಿ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

