ಕೋಲಾರ

ಬಿಜೆಪಿ ಅಭ್ಯರ್ಥಿಬೆಂಬಲಿಸಲು ಮನವಿ

Published On :

ಮಾಲೂರು: ಶಿಕ್ಷಕರ ಹಾಗೂ ಪದವೀಧರರ ಸಮಸ್ಯೆಗಳಿಗೆ ಉತ್ತಮ ಸ್ಪಂದನೆ ನೀಡುತ್ತಿರುವ ಡಾ.ಶಿವಯೋಗಿಸ್ವಾವು ಅವರನ್ನು ಮತ್ತೊಂದು ಅವಧಿಗೆ ಚುನಾಯಿಸಿ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದರು. ಅವರು ಪಟ್ಟಣದ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರೂಡನೆ ಮಾತನಾಡುತ್ತ ಡಾ.ಶಿವಯೋಗಿ ಸ್ವಾಮಿ ಹುಟ್ಟು ಹೋರಾಟಗಾರರಾಗಿದ್ದು, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದರು.  ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶಪ್ಪ,ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಕೃಷ್ಣಾರೆಡ್ಡಿ, ತಾಲೂಕು ಅಧ್ಯಕ್ಷ ಸೂ.ವೆಂಕಟೇಶ್, ಮುಖಂಡ ಜಿ.ಇ. ರಾಮೇಗೌಡ, ಯುವಮೋರ್ಚಾದ ಗೋಪಾಲ ಕೃಷ್ಣ, ಪುರಸಭೆ ಸದಸ್ಯ ಹನುಮಂತ ರೆಡ್ಡಿ, ವೆಂಕಟೇಶ್, ನಾರಾಯಣಸ್ವಾಮಿ ಇದ್ದರು.


ಉತ್ತಮ ಬೆಳೆಗಾಗಿ ಮಣ್ಣಿನ ಪರೀಕ್ಷೆ ಅಗತ್ಯ


ಮಾಲೂರು: ರೈತರು ತಮ್ಮ ಜಮೀನಿಗೆ ಅವಶ್ಯವಿರುವಷ್ಟು ಪೋಷಕಾಂಶ ಮಣ್ಣಿನಲ್ಲಿ ಇದೆಯೇ ಎಂದು ಅಗಾಗ್ಗೆ ಪರೀಕ್ಷಿಸಿಕೊಂಡು ವ್ಯವಸಾಯ ಮಾಡಿದಾಗ ಮಾತ್ರ ಉತ್ತಮ ಬೆಳೆ ತೆಗೆಯಲು ಸಾಧ್ಯ ಎಂದು ಕೃಷಿ ವಿಜ್ಞಾನಿ ಚಿಂತಾಮಣಿಯ ಶಶಿ ಕುಮಾರ್ ಹೇಳಿದರು.
 ಅವರು ತಾಲೂಕಿನ ಲಕ್ಕೂರು ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 2 ನೇ ಹಂತದ ಭೂ ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ರೈತರು ತಮ್ಮ ಭೂಮಿಯಲ್ಲಿರುವ ಪೋಷಕಾಂಶಗಳ ಬಗ್ಗೆ ಅರಿವು ಪಡೆಯಬೇಕು. ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬೇಕು. ಅಗಾಗ್ಗೇ ಮಣ್ಣು, ನೀರು ಪರೀಕ್ಷಿಸುವ ಜತೆಯಲ್ಲಿ ಬಿತ್ತನೇ ಬೀಜ, ರಸಗೊಬ್ಬರ, ಕೀಟನಾಶಕ, ಬೀಜೋಪಾಚಾರ ಸರಿ ಪ್ರಮಾಣದಲ್ಲಿ ಬಳಸಬೇಕು ಎಂದರು. ಈ ಹಿಂದೆ ನಮ್ಮ ಜಿಲ್ಲೆಯಲ್ಲಿ ನಾಟಿ ಗೂಬ್ಬರ ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಮೂಲಕ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುತ್ತಿದ್ದರು. ಈಗ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಪರಿಣಾಮ ಭೂಮಿಯ ಫಲವತ್ತತೆ ಕಡಿಮೆಯಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.