ಶಾಶ್ವತ ನೀರಾವರಿ ಯೋಜನೆ ಜಾರಿಯಲ್ಲಿ ಸರ್ಕಾರ ವಿಫಲ
ಚಿಂತಾಮಣಿ: ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೆ ತರುವಲ್ಲಿ ಸರ್ಕಾರ ಸಂಪೂರ್ಣ ವಿಫಲಗೊಂಡಿದೆಯೆಂದು ಕರ್ನಾಟಕ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಮಂಜುನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಖಾಸಗಿ ಬಸ್ ನಿಲ್ದಾಣ ಬಳಿ ಇರುವ ವಿದ್ಯಾಗಣಪತಿ ರಂಗ ಮಂದಿರದಲ್ಲಿ ಕರ್ನಾಟಕ ಜಾಗೃತಿ ವೇದಿಕೆಯ ತಾಲೂಕಿನ ಹೋಬಳಿ ಘಟಕಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಮಾತನಾಡಿದರು. ಕೋಲಾರ-ಚಿಕ್ಕಬಳ್ಳಾಪುರ ಅವಿಭಾಜ್ಯ ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿ ಯೋಜನೆ ಜಾರಿ ಆಗದೆ ಇರುವುದರಿಂದ ರೈತರು ಭೂಮಿ ಇದ್ದೂ, ಬಡತನಕ್ಕೆ ತುತ್ತಾಗಿದ್ದಾರೆ. ಇಂಥ ಜನರ ನೆರವಿಗೆ ಧಾವಿಸದ ಸರ್ಕಾರದ ನಿರ್ಲಕ್ಷ್ಯದಿಂದ ಜನರು ಬರ ಪರಿಸ್ಥಿತಿ ಎದುರಿಸುತ್ತಿದ್ದರೂ ರೈತರ ಸಮಸ್ಯೆಗೆ ಸ್ಪಂದಿಸದೆ ಕಡೆಗಣಿಸುತ್ತಿದೆ ಎಂದು ರಾಜ್ಯಾಧ್ಯಕ್ಷ ಕೆ.ಮಂಜುನಾಥ್ ಕಿಡಿ ಕಾರಿದರು.
ತಾಪಂ ಪಕ್ಷೇತರ ಸದಸ್ಯೆ ವೆಂಕಟರತ್ನಮ್ಮ ಕಾಂಗ್ರೆಸ್ಗೆ
ಬಂಗಾರಪೇಟೆ: ತಾಲೂಕು ಪಂಚಾಯ್ತಿ ಪಕ್ಷೇತರ ಸದಸ್ಯೆ ವೆಂಕಟರತ್ನಮ್ಮ ಅಧಿಕೃತವಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಶಾಸಕ ಎಸ್.ಎನ್. ನಾರಾಯಣಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಚಿಕ್ಕಅಂಕಂಡಹಳ್ಳಿ ತಾಪಂ ಕ್ಷೇತ್ರದಿಂದ ವೆಂಕಟರತ್ನಮ್ಮ ಬಿಜೆಪಿ ಪಕ್ಷದಿಂದ ಟಿಕೆಟ್ ಬಯಸಿದ್ದರು. ಆದರೆ ಪಕ್ಷ ಕಡೆಗಣಿಸಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಪಕ್ಷದ ಅಧಿಕೃತ ಅಭ್ಯರ್ಥಿ ಸೋಲಿಗೆ ಕಾರಣರಾಗಿ ಜಯ ಗಳಿಸಿದ್ದರು. ನಂತರ ಪಕ್ಷದ ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು. ಕ್ಷೇತ್ರದಲ್ಲಿ ಈಗ ಕಾಂಗ್ರೆಸ್ ಶಾಸಕರಿರುವುದರಿಂದ ಬಿಜೆಪಿ ಸಖ್ಯವನ್ನು ಬಿಟ್ಟು ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕ್ಷೇತ್ರದಲ್ಲಿ ಒಂದು ವರ್ಷದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮನ ಸೋತು ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಕಾಂಗ್ರೆಸ್ ಸೇರ್ಪಡೆಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

