ಕೋಲಾರ

ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಗತ್ಯ

Published On :

ರಾಜ್ಯ ಒಕ್ಕಲಿಗರ ಸಂಘಕ್ಕೆ ಕೃಷಿ ಸಚಿವ ಕೃಷ್ಣ ಬೈರೇಗೌಡ ಮನವಿ


ಕೋಲಾರ: ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ಪ್ರತಿ ಜಿಲ್ಲೆಯಲ್ಲಿ ಉದ್ಯೋಗಾಧಾರಿತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕೆಂದು ಕೃಷಿ ಸಚಿವ ಕೃಷ್ಣಬೈರೇಗೌಡ ರಾಜ್ಯ ಒಕ್ಕಲಿಗರ ಸಂಘಕ್ಕೆ ಮನವಿ ಮಾಡಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕೆಂಪೇಗೌಡರ 504ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಮುದಾಯ ಅಭಿವೃದ್ಧಿಗೊಳ್ಳಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಎರಡೂ ಅತ್ಯವಶಕವಾಗಿರುವುದರಿಂದ ಸಂಘದ ಆಡಳಿತ ಮಂಡಳಿಯವರು ವೃತ್ತಿಪರ ಶಿಕ್ಷಣದ ಸಂಸ್ಥೆಗಳನ್ನು ಕಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದರು. ಕೆಂಪೇಗೌಡರ ಜಯಂತಿಯನ್ನು ಸರ್ಕಾರಿ ಜಯಂತಿಯಾಗಿ ಆಚರಣೆ ಮಾಡಿ ರಜೆಯನ್ನು ಘೋಷಣೆ ಮಾಡಬೇಕೆಂಬ ಪ್ರಸ್ತಾಪ ಮುಖ್ಯಮಂತ್ರಿಗಳ ಮುಂದೆ ಇದೆ. ಮುಂದಿನ ದಿನಗಳಲ್ಲಿ ಸರ್ಕಾರ ಈ ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಮಾತನಾಡಿ, ಆದಿಚುಂಚನ ಗಿರಿ ಶಾಖಾ ಮಠ ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ಭೂಸ್ವಾಧೀನ ಪಡಿಸಿಕೊಂಡಿರುವ ಜಾಗದಲ್ಲಿ ಸಮುದಾಯದ ಹಿತದೃಷ್ಟಿಯನ್ನು ಮುಂದಿಟ್ಟುಕೊಂಡು ಎಂಜನಿಯರಿಂಗ್ ಕಾಲೇಜು ನಿರ್ಮಾಣ ಮಾಡಬೇಕೆಂದು ಅವರು ಒತ್ತಾಯಿಸಿದರು.
ರಾಜ್ಯ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಅಪ್ಪಾಜಿಗೌಡ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಸಂಘದಿಂದ ಕೋಲಾರ ಜಿಲ್ಲೆಯ ಒಕ್ಕಲಿಗ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು. ಪಟ್ಟನಾಯಕನಹಳ್ಳಿ ಪೀಠಾಧ್ಯಕ್ಷ ನಂಜವದೂತ ಸ್ವಾಮೀಜಿ ಆಶೀವಚನ ನೀಡಿ , ಕೆಂಪೇಗೌಡರ ಜಯಂತಿಯನ್ನು ಆಚರಿಸಲು ರಾಜ್ಯ ಸರ್ಕಾರಕ್ಕೆ ಆಗದಿದ್ದರೆ ಬೇರೆ ಜಯಂತಿಗಳನ್ನು ರದ್ದು ಮಾಡಿ ಮಹಾಪುರಷರ ಜಯಂತಿಯ ದಿನದಂದು ಒಂದು ಗಂಟೆ ಹೆಚ್ಚು ಕೆಲಸ ಮಾಡಿ ರಾಜ್ಯದ ಅಭಿವೃದ್ಧಿಯನ್ನು ಹೆಚ್ಚಿಸಲಿ ಎಂದರು. ಅಧ್ಯಕ್ಷತೆಯನ್ನು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ವಿ.ಶಂಕರಪ್ಪ ವಹಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಜಿಲ್ಲೆಯಿಂದ ನಿರ್ದೇಶಕರಾಗಿ ಆಯ್ಕೆಯಾಗಿರುವ ವಕ್ಕಲೇರಿ ರಾಮು, ಯಲವಳಿ ರಮೇಶ್, ಸತೀಶ್ ಮತ್ತು ಕೋಚಿಮುಲ್, ಆಯ್ಕೆಯಾದ ರಾಮಕೃಷ್ಣೇಗೌಡ ಮತ್ತು ಬೈರರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಬಿಸ್ಸೇಗೌಡ, ಮುಖಂಡರಾದ ಶಿವಕುಮಾರ್ ಗೌಡ, ಡಾ.ರಮೇಶ್, ಜಿ.ಪಂ.ಸದಸ್ಯ ಎಂ.ಎಸ್.ಆನಂದ್, ಅಶ್ವತ್ಥ, ಡಾ.ವೆಂಕಟಚಲ, ನಿಸರ್ಗ ಟ್ರಸ್ಟ್ ರಾಮಲಿಂಗೇಗೌಡ, ಡಾ.ಮೌನಿ, ಗೋವಿಂದರಾಜು, ಮುರಳೀಗೌಡ ಇದ್ದರು.



ಕ್ಷೇತ್ರ ಪ್ರಯೋಗ ಕೈಬಿಡಲು ಒತ್ತಾಯ
ಬಂಗಾರಪೇಟೆ: ಕುಲಾಂತರಿ ಬೀಜಗಳನ್ನು ರೈತರ ಭೂಮಿಯಲ್ಲಿ ಕ್ಷೇತ್ರ ಪ್ರಯೋಗ (ಫೀಲ್ಡ್ ಟ್ರಯಲ್) ಮಾಡುವ ಆದೇಶವನ್ನು ಸರ್ಕಾರ ಕೈ ಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ಶುಕ್ರವಾರ ತಹಸೀಲ್ದಾರ್ ಎಸ್.ಆರ್.ಉಷಾ ಅವರ ಮೂಲಕ ಪ್ರಧಾನ ಮಂತ್ರಿಗಳಿಗೆ  ಮನವಿ ಸಲ್ಲಿಸಿದರು. ಹಿಂದಿನ ಸರ್ಕಾರ ಸುಮಾರು 200 ಎಕರೆ ಪ್ರದೇಶದಲ್ಲಿ ಕುಲಾಂತರಿ ಬೀಜದ ಕ್ಷೇತ್ರ ಪ್ರಯೋಗಕ್ಕೆ ಅನುಮತಿ ನೀಡಿದೆ. ಈ ಬೀಜದ ಬಗ್ಗೆ ಸಂಪೂರ್ಣ ಸಂಶೋಧನೆ ಮಾಡದೆ ರೈತರ ಭೂಮಿಯಲ್ಲಿ ಪ್ರಯೋಗಕ್ಕೆ ಅವಕಾಶ ನೀಡಿರುವುದು ಆತಂಕಕಾರಿ ಸಂಗತಿ ಎಂದು ದೂರಿದರು. ಕುಲಾಂತರಿ ಬೀಜದಿಂದ ಕರ್ನಾಟಕದಲ್ಲಿ 5 ಲಕ್ಷ ಎಕರೆ ಹತ್ತಿ ಬೆಳೆ ನಷ್ಟವಾಗಿದೆ. ಅಲ್ಲದೆ ಭೂಮಿಯ ಫಲವತ್ತತೆ ಕೂಡ ಕ್ಷೀಣಿಸಲಿದೆ ಎಂದರು.  ರಾಜ್ಯ ಘಟಕ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ತಾಲೂಕು ಘಟಕ ಅಧ್ಯಕ್ಷ ಟಿ.ಎನ್.ರಾಮೇಗೌಡ, ನಾರಾಯಣಸ್ವಾಮಿ, ಲಕ್ಷ್ಮಣ, ಮುನಿಸ್ವಾಮಿಗೌಡ, ಚಲಪತಿ, ಆಂಜಿ, ವೆಂಕಟೇಶ್, ರಘು, ತಮ್ಮಯ್ಯ, ಸೀನಪ್ಪ, ರಮೇಶ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.