ಕೋಲಾರ

ಶೈಕ್ಷಣಿಕ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅಗತ್ಯ

Published On :

ಮಾಲೂರು: ಶೈಕ್ಷಣಿಕ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹಳ ಮಹತ್ತರವಾದುದು ಎಂದು ಲಕ್ಕೂರು ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಸೌಭಾಗ್ಯವತಿ ಹೇಳಿದರು.
ತಾಲೂಕಿನ ಲಕ್ಕೂರು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವರಾವ ಶೆಟ್ಟಿ, ಲಕ್ಷಿನಾರಾಯಣ ಶೆಟ್ಟಿ, ಸತ್ಯನಾರಾಯಣಶೆಟ್ಟಿ ಹಾಗೂ ಗೋಪಾಲ ಕೃಷ್ಣ ಶೆಟ್ಟಿ ಅವರು ಬಡ ಮಕ್ಕಳ ಶಿಕ್ಷಣಕ್ಕಾಗಿ ಥಿಯಾಸಫಿಕಲ್ ಸೊಸೈಟಿಯಲ್ಲಿ ಹೂಡಿದ್ದ ಹಣದಲ್ಲಿ ಖರೀದಿಸಲಾಗಿದ್ದ ನೋಟ್ ಪುಸ್ತಕಗಳನ್ನು ಮಕ್ಕಳಿಗೆ ಉಚಿತವಾಗಿ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಗತಿಗೆ ದುಡಿಯಿರಿ: ಗುಣಾತ್ಮಕ ಶಿಕ್ಷಣದ ಸಾಧನೆಗಾಗಿ ಶಿಕ್ಷಕರು, ಪೋಷಕರು, ಜನಪ್ರತಿನಿಧಿಗಳು,ಅಧಿಕಾರಿಗಳು ಒಂದಾಗಿ ಸೇವೆ ಸಲ್ಲಿಸಿ ಶೈಕ್ಷಣಿಕ ಪ್ರಗತಿಗೆ ದುಡಿಯಬೇಕಾಗಿದೆ ಎಂದರು.
 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಡಿ.ಪಿ.ವೆಂಕಟೇಶನ್, ಸರ್ಕಾರ ಶಿಕ್ಷಣದ ಪ್ರಗತಿಗಾಗಿ ಹಲವಾರು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಇವುಗಳ ಯಶಸ್ವಿಗೆ ಎಲ್ಲರೂ ಸಕ್ರಿಯವಾಗಿ ಪಾಲ್ಗೂಳುವುದು ಅವಶ್ಯವಾಗಿದೆ ಎಂದರು.
ದಾನಿ ವಿಜಯ ಕುಮಾರ್ ಮಾತನಾಡಿ, ಸೌಲಭ್ಯ-ಸವಲತ್ತು ಪಡೆದ ಮಕ್ಕಳು ಒಳ್ಳೆ ವಿದ್ಯಾವಂತರಾಗಿ ಶಾಲೆಗೆ ಗ್ರಾಮಕ್ಕೆ ಕೀರ್ತಿ ತರಬೇಕೆಂದು ಆಶಿಸಿದರು. ದಾನಿಗಳ ಮಕ್ಕಳಾದ ಸುರೇಶ್, ಮಧು ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.