ಉಪ್ಪಾರಪೇಟೆ ಗ್ರಾಪಂನಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ
ಚಿಂತಾಮಣಿ: ಉಪ್ಪಾರಪೇಟೆ ಗ್ರಾಮ ಪಂಚಾಯ್ತಿ ಕಾರ್ಯವೈಖರಿ ಬಗ್ಗೆ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಹಾಗೂ ಮಾಜಿ ಶಾಸಕ ಎಂ.ಸಿ.ಸುಧಾಕರ್ ಬೆಂಬಲಿತ 2 ಗುಂಪುಗಳ ನಡುವೆ ಪರ ವಿರೋಧ ವಾಗ್ವಾದಕ್ಕಿಳಿದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಗ್ರಾಪಂ ಭ್ರಷ್ಟಾಚಾರಗಳ ಬಗ್ಗೆ ಸೋಮವಾರ ಶಾಸಕ ಕೃಷ್ಣಾರೆಡ್ಡಿ ಬೆಂಬಲಿಗರು ಅಕ್ರಮಗಳ ವಿರುದ್ಧ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಇದನ್ನು ತಿಳಿದ ಹಲವರು ಮಾಜಿ ಶಾಸಕ ಸುಧಾಕರ್ ಬೆಂಬಲಿತ ಮುಖಂಡ ಸೈಯದ್ ಏಜಾಜ್ ಮತ್ತು ಮಗ ಸೈಯದ್ ತಾರೀಪ್ ಗುಂಪು ಗ್ರಾಪಂ ಮುಂಭಾಗದಲ್ಲಿ ಜಮಾವಣೆಗೊಂಡು, ಪ್ರತಿಭಟನೆಗೆ ಅಡ್ಡಿಪಡಿಸಲು ಮುಂದಾದರು. ಆಗ ಮತ್ತೊಂದು ಗುಂಪಿನಿಂದ ವಿರೋಧ ವ್ಯಕ್ತವಾಗಿ ಕೈ ಕೈ ಮೀಲಾಯಿಸುವ ಹಂತಕ್ಕೂ ಹೋಯಿತು. ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಗುಂಪುಗಳನ್ನು ಚದುರಿಸಿದರು. ಗ್ರಾಮ ಪಂಚಾಯ್ತಿಯಲ್ಲಿ ಹಲವು ಅಧಿಕಾರಿಗಳು ಏಕ ಪಕ್ಷೀಯವಾಗಿ ವರ್ತಿಸಿ ಜನರಿಗೆ ನ್ಯಾಯ ದೊರಕಿಸುತ್ತಿಲ್ಲ. ಸಾಮನ್ಯರಲ್ಲಿ ಗುಂಪುಗಾರಿಕೆ ಮಾಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದಾಗಿ ಪೊಲೀಸರ ಎದುರಿನಲ್ಲಿ ದೂರು ನೀಡಿದರು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಲಿಖಿತ ಮೂಲಕ ದೂರು ನೀಡಲು ತಿಳಿಸಿದರು.
ಸೌಲಭ್ಯ ಕಲ್ಪಿಸಲು ವಿಫಲ: ಗ್ರಾಮಸ್ಥರಿಂದ ಪ್ರತಿಭಟನೆ
ಚಿಂತಾಮಣಿ: ಉಪ್ಪಾರಪೇಟೆ ಗ್ರಾಪಂನಲ್ಲಿ ಜನರಿಗೆ ಅಧಿಕಾರಿಗಳು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿ ನೂರಾರು ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು. ಉಪ್ಪಾರಪೇಟೆ, ಸೋರಪ್ಪನಹಳ್ಳಿ, ರಾಯಪ್ಪನಹಳ್ಳಿ, ಅಮಿಟಗಾನಹಳ್ಳಿ, ಬೊಮ್ಮೇಕಲ್ಲು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ನೇತೃತ್ವವನ್ನು ಎ.ಸಿ.ಆಂಜನೇಯರೆಡ್ಡಿ ಮತ್ತು ಎಂ.ಷಫಿ ಹಾಗೂ ಶ್ರೀನಿವಾಸರೆಡ್ಡಿ ವಹಿಸಿದ್ದರು. ಅಧಿಕಾರಿಗಳು ಹಲವು ಮಧ್ಯವರ್ತಿಗಳ ಕೈಗೊಂಬೆಗಳಾಗಿ ವಿವಿಧ ಯೋಜನೆಗಳಲ್ಲಿ ಅಕ್ರಮಕ್ಕೆ ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಛೀಮಾರಿ ಹಾಕಿದರು. ಗ್ರಾಮದ ಮುಖಂಡ ಶ್ರೀನಿವಾಸ್ ರೆಡ್ಡಿ ಮಾತನಾಡಿದರು. ಈ ವಿಷಯ ಗೊತ್ತಾಗುತ್ತಿದ್ದಂತೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ವೆಂಕಟೇಶಮೂರ್ತಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದರು. ನಂತರ ಪಿಡಿಒ ಹಾಗೂ ಕಾರ್ಯದರ್ಶಿ ಕೃಷ್ಣಪ್ಪ ಮತ್ತು ಗ್ರಾಪಂ ಅಧ್ಯಕ್ಷ ಶ್ಯಾಮಲನಾರಾಯಣಸ್ವಾ ಸಮಕ್ಷಮದಲ್ಲಿ ಸಭೆ ನಡೆಸಲಾಯಿತು. ಸಮಸ್ಯೆ ಪರಿಹಾರಕ್ಕೆ 3 ದಿನ ಗಡವು ನೀಡಲಾಯಿತು. ಪ್ರತಿಭಟನೆಯಲ್ಲಿ ಸೈಯದ್ ಜಮೀಲ್, ಅವಳಪ್ಪ, ಟಿ.ವಿ.ಮುನೇಂದ್ರ, ಜಿ.ಎಸ್.ಶ್ರೀನಿವಾಸ್, ನರಸಿಂಹರೆಡ್ಡಿ, ಶಿವಶಂಕರ್, ಮನೋಹರ್, ಅಮ್ಮನಾರಾಯಣಸ್ವಾಮಿ, ಶಾಕೀರ್, ಕದಿರಪ್ಪ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

