ಕೆರೆಗಳಿಗೆ ನೀರು ಇಂದು ಮಹತ್ವದ ಸಭೆ
-ಪಾ.ಶ್ರೀ. ಅನಂತರಾಮ್
ಕೋಲಾರ: ಬೆಂಗಳೂರು ನಗರದ ಬೆಳ್ಳಂದೂರು ಕೆರೆಯ ಸಮೀಪದ ಕೋರಮಂಗಲ-ಚಲಘಟ್ಟ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಜಿಲ್ಲೆಯ ಕೆರೆಗಳಿಗೆ ನೀರು ಒದಗಿಸುವ ಯೋಜನೆ ಕುರಿತು ಚರ್ಚಿಸಲು ಜೂ.17ರಂದು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ.
ಜಿಲ್ಲೆಯಲ್ಲಿ ಅಂತರ್ಜಲ ಸಮಸ್ಯೆ ಹೆಚ್ಚಿರುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿದ ಕೆ.ಆರ್.ಪುರಂ ಬಳಿ ಇರುವ ಎಲೆಮಲ್ಲಪ್ಪಶೆಟ್ಟಿ ಕೆರೆಯಿಂದ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಯ ಕೆರೆಗಳಿಗೆ ಹರಿಸಲು ಯೋಜನೆ ರೂಪಿಸಲಾಗಿತ್ತು.
ಉದ್ದೇಶಿತ ಯೋಜನೆಯ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಮುಖ್ಯ ಕಾರ್ಯದರ್ಶಿಗಳು ಮಂಗಳವಾರ ಮಧ್ಯಾಹ್ನ ಕರೆದಿರುವ ಸಭೆಯಲ್ಲಿ ಜಿಲ್ಲಾಧಿಕಾರಿ ಡಿ.ಕೆ. ರವಿ, ಜಿಪಂ ಸಿಇಒ ವಿನೋತ್ ಪ್ರಿಯಾ, ಪ್ರಾದೇಶಿಕ ಆಯುಕ್ತರ ಸಲಹೆ ಮೇರೆಗೆ ರಚಿಸಲಾಗಿರುವ ಸಮಿತಿಯ ಸದಸ್ಯರಾಗಿರುವ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಇಇ ಎಸ್.ಎನ್. ಕೃಷ್ಣಪ್ಪ, ಬೆಂಗಳೂರಿನ ಕೆರೆ ಅಭಿವೃದ್ಧಿ ಪ್ರಾಧಿಕಾರದ ಇಇ ನಾಗರಾಜು, ಕೋಲಾರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಇ ಪುಟ್ಟಸ್ವಾಮಿ, ಬೆಂಗಳೂರಿನ ಉಪ ಅಭಿವೃದ್ಧಿ ಅಧಿಕಾರಿ ಹಾಗೂ ಕೆಐಎಡಿಬಿಯ ಇಇ ಜಯೇಂದ್ರ ಹಾಗೂ ಕರ್ನಾಟಕ ರಾಜ್ಯ ಮಾವಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಯತೀಶ್ ಭಾಗವಹಿಸುವ ನಿರೀಕ್ಷೆ ಇದೆ.
ಮಂಗಳವಾರ ನಡೆಯುವ ಸಭೆಯಲ್ಲಿ ಮುಖ್ಯಕಾರ್ಯದರ್ಶಿಗಳಿಗೆ ಮನದಟ್ಟಾಗುವ ರೀತಿಯಲ್ಲಿ ಅಧಿಕಾರಿಗಳು ಯೋಜನೆಯ ಬಗ್ಗೆ ಮಾಹಿತಿ ನೀಡಿದರೆ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಿ ಅನುಮೋದನೆ ಪಡೆಯಲು ಸಹಾಯವಾಗುತ್ತದೆ. ಕುರ್ಕಿವೆಂಗಲಯ್ಯನ ಕೆರೆ, ನರಸಾಪುರ, ದೊಡ್ಡವಲ್ಲಬ್ಬಿ, ಸಿಂಗೇಹಳ್ಳಿ, ಜನ್ನಘಟ್ಟ, ಎಸ್. ಆಗ್ರಹಾರ, ಮುದುವಾಡಿ, ಚಲ್ಲಪಲ್ಲಿ ಅಮಾನಿಕೆರೆ, ಹೊಳಲಿ ಕೆರೆ, ಬೇತಮಂಗಲ ಕೆರೆ, ರಾಮಸಾಗರ, ಅರಾಭಿಕೊತ್ತನೂರು ಕೆರೆ, ಕೆಂದಟ್ಟಿ, ಮಡೇರಹಳ್ಳಿ, ಅಮ್ಮೇರಹಳ್ಳಿ, ಸೀಸಂದ್ರ, ಕೆಂಬೋಡಿ, ಪಾರೇಹೊಸಹಳ್ಳಿ ಹಾಗೂ ಕೋಲಾರ ಅಮಾನಿ ಕೆರೆಗಳಿಗೆ ನೀರು ಒದಗಿಸಬಹುದೆಂದು ಯೋಜನೆ ಸಿದ್ಧಪಡಿಸಿರುವ ತಜ್ಞರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

