ಕೋಲಾರ

ಗ್ರಾಪಂಗೆ ಭೇಟಿ ಕೊಡಿ

Published On :

ಶಿಡ್ಲಘಟ್ಟ: ಪಟ್ಟಣದ ತಾಲೂಕು ಕಚೇರಿಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಭೆಯನ್ನು ಲೋಕಸಭಾ ಸದಸ್ಯ ಕೆ.ಎಚ್.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೂಂಡಿದ್ದರು.
ಸಭೆಯಲ್ಲಿ ಮಾತನಾಡಿದ ಕೆ.ಎಚ್.ಮುನಿಯಪ್ಪ, ತಾಲೂಕು ಮತ್ತು ಜಿಲ್ಲಾ ಅಭಿವೃದ್ಧಿಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು. ವಾರಕ್ಕೊಮ್ಮೆಯಾದರೂ ತಾಲೂಕಿನ ಒಂದೊಂದು ಗ್ರಾಪಂಗೆ ಭೇಟಿ ಕೊಟ್ಟು, ಪರಿಶೀಲಿಸಿ ಜಿಲ್ಲಾಧಿಕಾರಿ, ಹಾಗೂ ಜಿಪಂ ಸಿಇಒಗಳಿಗೆ ವರದಿ ಸಲ್ಲಿಸಬೇಕು. ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರಾಮಗಳು ಹಾಗೂ ಪಟ್ಟಣ ಪ್ರದೇಶಗಳಿಗೆ ನೀರೂ ಪೂರೈಸುವ ವ್ಯವಸ್ಥೆ ಮಾಡಬೇಕು.
ಮನೆಗೊಂದು ಶೌಚಾಲಯ ಎಂಬ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. 5 ವರ್ಷ ಕಳೆದರೂ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಒಂದು ತಿಂಗಳ ಒಳಗಾಗಿ ಪೂರ್ಣ ಮಾಹಿತಿಯನ್ನು ನೀಡಬೇಕೆಂದು ಸೂಚಿಸಿದರು.
ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಯಲ್ಲಿ 400 ಕೆರೆಗಳಿದ್ದು, ಅವುಗಳು ಒತ್ತುವರಿಯಗಿದ್ದು ಒತ್ತುವರಿ ಭೂಮಿಯನ್ನು ಸಂಬಂಧಪಟ್ಟ ಇಲಾಖೆಯವರು ಸರ್ವೆ ಮಾಡಿಸಿ ಗಡಿ ಕಲ್ಲುಗಳನ್ನು ಹಾಕಬೇಕು ಎಂದೂ ತಿಳಿಸಿದರು.
ಮನವಿ ಸ್ವೀಕಾರ: ಸಭೆಯ ನಂತರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತ ಮುಖಂಡರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ, “ÁæÞÎæ½ ಇಲಾಖೆಯನ್ನು ಕೃಷಿ ಇಲಾಖೆ ಜತೆ ವಿಲೀನ ಮಾಡುವ ಪ್ರಕ್ರಿಯೆ ಬಿಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ÈÚáÛsÚßÈæ’ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ವಿಶಾಲ್, ಸಿಇಒ ನೀಲಾ ಮಂಜುನಾಥ್, ತಹಸಿಲ್ದಾರ್ ನಾರಾಯಣಸ್ವಾಮಿ, ಜಿಪಂ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ತಾಪಂ ಅಧ್ಯಕ್ಷ ಯರಬಚ್ಚಪ್ಪ, ಉಪಾಧ್ಯಕ್ಷೆ ಸರಸ್ವತಮ್ಮ ತಮ್ಮಣ್ಣ ಸೇರಿ, ನಾರಾಯಣಸ್ವಾಮಿ, ಸತೀಶ್, ಶಿವಲೀಲಾ ರಾಜಣ್ಣ, ಶ್ರೀರಾಮರೆಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.