ಕೋಲಾರ

ದಿಢೀರ್ ಪ್ರತಿಭಟನೆ, ರಸ್ತೆ ತಡೆ: ಸಂಚಾರಕ್ಕೆ ವ್ಯತ್ಯಯ

Published On :

ಕೋಲಾರ: ನಗರದ 24 ಹಾಗೂ 25ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಖಂಡಿಸಿ, ಕೆ.ಜಿ. ಮೊಹಲ್ಲಾ ನಿವಾಸಿಗಳು ಶತಶೃಂಗ ಜೋಡಿ ನೀರಿನ ಟ್ಯಾಂಕ್ ಮುಂಭಾಗದ ರಸ್ತೆಯಲ್ಲಿ ಸೋಮವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು.
ರಸ್ತೆಗೆ ಅಡ್ಡಲಾಗಿ ಕಲ್ಲುಗಳನ್ನಿಟ್ಟು ಮಹಿಳೆಯರಾದಿಯಾಗಿ ಖಾಲಿ ಬಿಂದಿಗೆಗಳೊಂದಿಗೆ ರಸ್ತೆ ತಡೆ ನಡೆಸಿ ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎರಡೂ ವಾರ್ಡ್‌ಗಳಲ್ಲಿ ಹಲವು ತಿಂಗಳಿನಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ನಗರಸಭೆಯಿಂದ ಎರಡ್ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡಬೇಕು. ಆದರೆ 15 ದಿನಕ್ಕೊಮ್ಮೆ ನೀರು ಸರಬರಾಜಾಗುತ್ತಿದೆ. ಕೆಲವು  ಬೀದಿಗಳ ಜನರಿಗಷ್ಟೇ ನೀರು ಸಿಗುತ್ತಿದ್ದು ಉಳಿದವರು ಪರದಾಡುವಂತಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು. ದಿಢೀರ್ ಪ್ರತಿಭಟನೆಯಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ ರಾತ್ರಿ ಆಗಿರುವುದರಿಂದ ಅಧಿಕಾರಿಗಳು ಸಿಗುವುದಿಲ್ಲ. ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಕೋರಿದರು. ಮಂಗಳವಾರ ಬೆಳಿಗ್ಗೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಹೇಳಿ ಜನರು ಚದುರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.