'ಮಕ್ಕಳನ್ನು ಸತ್ಪ್ರಜೆಗಳಾಗಿಸಿ'
ಚಿಕ್ಕಬಳ್ಳಾಪುರ: ಮಹಾತ್ಮರು, ಮಹಾನ್ ನಾಯಕರ ಆದರ್ಶ ಜೀವನ ತತ್ವಗಳನ್ನು ಮಕ್ಕಳಲ್ಲಿ ಬೆಳೆಸಿ ಸತ್ಪ್ರಜೆಗಳನ್ನಾಗಿ ರೂಪಿಸಬೇಕೆಂದು ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶ್ರೀ ಮಂಗಿಶೆಟ್ಟಿ ನರಸಿಂಹಯ್ಯ ರಂಗಮ್ಮ ಟ್ರಸ್ಟ್ ಅಧ್ಯಕ್ಷ ಸಿ. ನಾರಾಯಣಪ್ಪ ಸಲಹೆ ನೀಡಿದರು.
ನಗರದ ವಾಪಸಂದ್ರ ಬಡಾವಣೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಿಶೆಟ್ಟಿ ನರಸಿಂಹಯ್ಯ ರಂಗಮ್ಮ ಟ್ರಸ್ಟ್ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಧ್ಯಕ್ಷ ಎಂ.ಎನ್. ಸತ್ಯನಾರಾಯಣ ಮಾತನಾಡಿ, ಸಮಾಜ ನಮಗೇನು ನೀಡಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂಬುದನ್ನ ಅರಿತು ನಮ್ಮ ಕೈಯಲ್ಲಾದ ಕೆಲಸವನ್ನು ಮಾಡಬೇಕಿದೆ. ಈ ಸಮಾಜದ ಉತ್ತಮ ಭವಿಷ್ಯಕ್ಕಾಗಿ ದುಡಿದ ಎಷ್ಟೋ ಮಂದಿಯ ಶ್ರಮದಿಂದ ನಾವು ಸ್ವತಂತ್ರವಾಗಿದ್ದೇವೆ ಎಂದ ಅವರು, ವಿದ್ಯಾ ದಿಸೆಯ ಅವಧಿಯಲ್ಲಿ ಅನವಶ್ಯಕ ಕಾಲ ಹರಣ ಮಾಡದೇ ತಾವು ವ್ಯಾಸಂಗ ಮಾಡಿದ ಶಾಲೆಗೆ ಮತ್ತು ಗುರು-ಹಿರಿಯರಿಗೆ ಹಾಗೂ ಹೆತ್ತ ತಂದೆ-ತಾಯಿಗೆ ಗೌರವ ತರುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದವರು ಹೇಳಿದರು.
ಮಂಗಿಶೆಟ್ಟಿ ಟ್ರಸ್ಟ್ ಉಪಾಧ್ಯಕ್ಷ ಎಂ.ಎನ್. ಶಿವಶಂಕರಮೂರ್ತಿ ಮಾತನಾಡಿದರು.
ವಾಪಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಶಾಂತಿ ಬಾಲಮಂದಿರ ಸೇರಿದಂತೆ ಸುಮಾರು 1 ಸಾವಿರ ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.ಸರ್ಕಾರಿ ಮಾದರಿ ಹೊಸ ಹಿರಿಯ ಪ್ರಾಥಮಿಕ ಶಾಲೆ,ಗರ್ಲ್ಸ್ ಸ್ಕೂಲ್ , ಕರ್ನಾಟಕ ಮಾದರಿ ಹಳೇ ಹಿರಿಯ ಪ್ರಾಥಮಿಕ ಶಾಲೆ, ಚಾಮರಾಜಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೂ ಪ್ರಸಕ್ತ ಸಾಲಿನ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುತ್ತಿರುವುದಾಗಿ ಟ್ರಸ್ಟ್ ಕಾರ್ಯದರ್ಶಿ ಉತ್ತಮ್ ಚಂದ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

