ರಾಜಕೀಯ ದ್ವೇಷ: ಮಾರಣಾಂತಿಕ ಹಲ್ಲೆ
ಕೆಜಿಎಫ್: ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಆಂಡ್ರಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೂಚೇಪಲ್ಲಿ ಗ್ರಾಮದ ನಿವಾಸಿ ನಾರಾಯಣರೆಡ್ಡಿ ಹಲ್ಲೆಗೊಳಗಾದ ವ್ಯಕ್ತಿ. ಇವರು ತಮ್ಮ ತೋಟದ ಕಡೆಯಿಂದ ತಮ್ಮ ಬೈಕ್ನಲ್ಲಿ ಗ್ರಾಮದ ಲಕ್ಷ್ಮಪ್ಪ ಎಂಬುವರ ಅಂಗಡಿ ಬಳಿ ಬಂದು, ಕ್ಯಾಸಂಬಳ್ಳ ಗ್ರಾಮದ ಸೀನಪ್ಪ ಜತೆ ಮಾತನಾಡುತ್ತಿದ್ದರು. ಈ ವೇಳೆ ಚಲಪತಿ ಹಾಗೂ ಇತರರು ದೊಣ್ಣೆಗಳು ಮತ್ತು ಮಚ್ಚುಗಳನ್ನು ಹಿಡಿದುಕೊಂಡು ಬಂದು, ನಾರಾಯಣರೆಡ್ಡಿ ಮೇಲೆ ಹಲ್ಲೆ ನಡೆಸಿದ್ದಾರೆ. ತಲೆಗೆ ಗಂಭೀರವಾಗಿ ಗಾಯಗೊಂಡು ಕೆಳಗೆ ಬಿದ್ದಾಗ ಚಲಪತಿ ಹಾಗೂ ಇತರರು ಪರಾರಿಯಾಗಿದ್ದಾರೆ. ನಾರಾಯಣರೆಡ್ಡಿ ಅವರನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಲಪತಿ ಹಾಗೂ ಇತರರ ವಿರುದ್ಧ ಪೊಲೀಸರು ಕೊಲೆ ಯತ್ನ ಕೇಸ್ ದಾಖಲಿಸಿಕೊಂಡಿದ್ದಾರೆ.
ಅಪಘಾತ: ಬೈಕ್ ಸವಾರ ಸಾವು
ಶಿಡ್ಲಘಟ್ಟ: ತೊಟ್ಲಗಾನ ಹಳ್ಳಿ ಗೇಟ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮುನಿಕಾಳಪ್ಪ(53) ಮೃತಪಟ್ಟವ. ಬೈರಗಾನ ಹಳ್ಳಿಯಿಂದ ಶಿಡ್ಲಘಟ್ಟಕ್ಕೆ ಬೈಕ್ನಲ್ಲಿ ಅವರು ತೊಟ್ಲಗಾನ್ಹಳ್ಳಿ ಗೇಟ್ ಬಳಿ ಬಂದಾಗ ವಾಹನವೊಂದು ಡಿಕ್ಕಿ ಹೊಡೆದಿದೆ. ಆಗ ಮುನಿಕಾಳಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

