ಜಾನಪದ ಕಲಾವಿದರಿಗೆ ಮಾಸಾಶನ ಹೆಚ್ಚಿಸಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಮನವಿ
ಕೋಲಾರ: ಗ್ರಾಮೀಣ ಸಂಸ್ಕೃತಿಯನ್ನು ಕಾಪಾಡುತ್ತಿರುವ ಜಾನಪದ ಕಲಾವಿದರಿಗೆ ಸರ್ಕಾರ ಮಾಸಾಶನ ಹೆಚ್ಚಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಲ್. ಅನಿಲ್ಕುಮಾರ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ ಕನ್ನಡ ಜಾನಪದ ಕಲಾ ಸಂಘ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶೇಷ ಘಟಕ ಯೋಜನೆಯಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜಾನಪದ ಸಾಂಸ್ಕೃತಿಕ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಜಾನಪದ ಅಕಾಡೆಮಿಗೆ ನಮ್ಮ ಜಿಲ್ಲೆಯವರೇ ಆದ ಪಿಚ್ಚಳ್ಳಿ ಶ್ರೀನಿವಾಸ್ ಅಧ್ಯಕ್ಷರಾಗಿರುವುದು ಹೆಮ್ಮೆಯ ವಿಚಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಕೆ.ಹೆಚ್. ಮುನಿಯಪ್ಪ ಇನ್ನಿತರರ ಬೆಂಬಲದಿಂದ ಜಿಲ್ಲೆಗೆ ಉತ್ತಮ ಅವಕಾಶ ಸಿಕ್ಕಿದ್ದು, ಅನುಭವಿಗಳಾದ ಪಿಚ್ಚಳ್ಳಿ ಶ್ರೀನಿವಾಸ್ ಜಾನಪದ ಕ್ಷೇತ್ರಕ್ಕೆ ಹೆಚ್ಚಿನ ಶಕ್ತಿ ಹಾಗೂ ಗೌರವ ಸಿಗುವಂತೆ ಮಾಡುವ ವಿಶ್ವಾಸವಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವಿ. ವೆಂಕಟಮುನಿಯಪ್ಪ ಮಾತನಾಡಿದರು.
ಮೆರವಣಿಗೆಯಲ್ಲಿ 30 ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು. ನೆಹರು ಜಿಲ್ಲಾ ಯುವಜನಾಧಿಕಾರಿ ನಾರಾಯಣಗೌಡ, ದಸಂಸ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಟಿ. ವಿಜಯಕುಮಾರ್, ರೇಷ್ಮೆ ಬೆಳೆಗಾರರ ಸಹಕಾರ ಬ್ಯಾಂಕಿನ ಅಧ್ಯಕ್ಷ ಬಾಸ್ಕರಬಾಬು, ಗ್ರಾಮ ಪಂಚಾಯತಿ ಅಧ್ಯಕ್ಷೆ ಮುನಿಯಮ್ಮ, ಉಪಾಧ್ಯಕ್ಷ ಮುನಿವೆಂಕಟಪ್ಪ ಇನ್ನಿತರರು ಭಾಗವಹಿಸಿದ್ದರು. ಮುರಳಿ ನಿರೂಪಿಸಿ, ಬೈಯಣ್ಣ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

