ಸಮಸ್ಯೆ ಬಗೆಹರಿಸಲು ಚೌಡರೆಡ್ಡಿ ಗೆಲ್ಲಬೇಕು: ಮಂಜುನಾಥ್ಗೌಡ
ಮಾಲೂರು: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿರುವ ಚೌಡರೆಡ್ಡಿ ಅವರನ್ನು ಗೆಲ್ಲಿಸುವಂತೆ ಮತದಾರರಿಗೆ ಶಾಸಕ ಮಂಜುನಾಥ್ಗೌಡ ಮನವಿ ಮಾಡಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲ ಚೌಡರೆಡ್ಡಿ ಅವರು ನಮ್ಮ ಜಿಲ್ಲೆಯವರು. ಜನಪ್ರತಿನಿಧಿಗಳು ಸ್ಥಳೀಯರಾಗಿದ್ದರೆ, ನಮ್ಮ ಸಮಸ್ಯೆಗೆ ಸ್ಪಂದಿಸಲು ಸಾಧ್ಯವಾಗುತ್ತದೆ. ಈ ಹಿಂದೆ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧ ಹಾಗೂ ವಿಧಾನ ಪರಿಷತ್ನಲ್ಲಿ ಶಿಕ್ಷಕರು ಹಾಗೂ ಪದವೀಧರ ಸಮಸ್ಯೆಗಳನ್ನು ಹೋಗಲಾಡಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದು, ಈಗ ಚೌಡರೆಡ್ಡಿ ಅವರ ಗೆಲವು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಆಸ್ತಿ ತೆರವು: ಪಟ್ಟಣದ ಅರಳೇರಿ ರಸ್ತೆಯ ಆದರ್ಶ ನಗರದ ರಾಜಾ ಕಾಲುವೆಗಳಲ್ಲಿ ನಿರ್ಮಾಣವಾಗಿರುವ, 150 ಕೋಟಿಗೂ ಹೆಚ್ಚಿನ ಮೌಲ್ಯದ ಆಸ್ತಿಗಳ ತೆರವು ಅನಿವಾರ್ಯವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದೇ ವೇಳೆ, ಪಟ್ಟಣದಲ್ಲಿರುವ ಸಿಎ ಸೈಟ್ ಗಳಲ್ಲಿ ನಿರ್ಮಾಣ ವಾಗಿರುವ ಕಟ್ಟಡಗಳಿಗೂ ಕುತ್ತು ಬರಲಿದೆ ಎಂದು ತಿಳಿಸಿದರು. ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿದರು. ಜೆಡಿಎಸ್ ತಾಲೂಕು ಅಧ್ಯಕ್ಷ ಚಂದ್ರಶೇಖರ್ಗೌಡ, ಕೋಚಿಮುಲ್ ನಿರ್ದೇಶಕ ನಂಜೇಗೌಡ, ಪುರಸಭೆ ಸದಸ್ಯರಾದ ಅಲೂಮಂಜುನಾಥ್, ಜಾಕೀರ್ಖಾನ್ ಹಾಗೂ ಮುಖಂಡ ಚಿ.ರಾಮಚಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

