ಕೋಲಾರ

ನೀರು ಪೂರೈಕೆಗೆ ಆಗ್ರಹ

Published On :

ಚಿಂತಾಮಣಿ:  ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಕೋಡಿಗಲ್ ಗ್ರಾಮಸ್ಥರು ಇಲ್ಲಿಯ ತಾಲೂಕು ಪಂಚಾಯ್ತಿ ಮುಂಭಾಗದಲ್ಲಿ ಮಂಗಳವಾರ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನೆಡೆಸಿ ಪಂಚಾಯ್ತಿಕಚೇರಿಗೆ ಬೀಗ ಜಡಿದು ಅಧಿಕಾರಿಗಳಿಗೆ ದಿಗ್ಭಂದನ ಹಾಕಿದರು.
 ತಾಲೂಕಿನ ಮುಂಗಾನಹಳ್ಳಿ ಹೋಬಳಿ ಕೋಡಿಗಲ್‌ನಲ್ಲಿ ಸುಮಾರು ನೂರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಬಹುತೇಕ ಮಂದಿ ಪರಿಶಿಷ್ಟರು ಮತ್ತು ಹಿಂದುಳಿದ ವರ್ಗವರಾಗಿದ್ದು ಗ್ರಾಮಕ್ಕೆ ಕಳೆದ 6 ತಿಂಗಳಿನಿಂದ ನೀರಿನ ಸಮಸ್ಯೆ ತಾಂಡವಾಡುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿಗೆ ದೂರು ನೀಡಿದ್ದರೂ ಪ್ರಯೋಜನವಾಗಲಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಅಧಿಕಾರಿಗೆ ಛೀಮಾರಿ:  ನೀರಿಲ್ಲದೆ ಗ್ರಾಮಸ್ಥರು ದೂರದಿಂದ ನೀರು ಹೊತ್ತು ತರುವ ಪರಿಸ್ಥಿತಿ ನಿರ್ಮಾಣಗೊಂಡಿದ್ದರೂ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ದಿಕ್ಕಾರಗಳನ್ನು ಕೂಗಿದರು.
 ಸುದ್ದಿ ತಿಳಿದ ಘಟನಾಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯ್ತಿ ವ್ಯವಸ್ಥಾಪಕ ಕೃಷ್ಣಪ್ಪ ಯಾವುದೇ ಭರವಸೆ ನೀಡದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು  ಛೀಮಾರಿ ಹಾಕಿದರು.
ರೈತಸಂಘ ಬೆಂಬಲ: ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ರೈತ ಸಂಘ ಹಾಗೂ ಹಸಿರುಸೇನೆಯ ಅಧ್ಯಕ್ಷ ರಘುನಾಥರೆಡ್ಡಿ ಹಾಗೂ ಪದಾಧಿಕಾರಿಗಳು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.
 ಪೋಲೀಸ್ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಮನಿಬೀರಪ್ಪ ಪ್ರತಿಭಟನಗಾರರನ್ನು ಸಮಾದಾನಪಡಿಸಿದರು. ಬಳಿಕ ಅಧಿಕಾರಿಗಳ ಜೊತೆ ಮಾತನಾಡಿ ಗ್ರಾಮಕ್ಕೆ ತಾತ್ಕಾಲಿಕವಾಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುವುದು ಹಾಗೂ ಒಂದು ವಾರದೊಳಗೆ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
 ಪ್ರತಿಭಟನೆಯಲ್ಲಿ ಗೀತಮ್ಮ, ನಾಗರತ್ನಮ್ಮ, ಪಾಪಮ್ಮ, ಸುಂದರಮ್ಮ, ರತ್ನಮ್ಮ, ಶಾರದಮ್ಮ, ಮಂಜುಳ, ಕಾಂತಮ್ಮ, ಕಲಾವತಿ, ರಾಮಲಕ್ಷ್ಮಿ, ಜಯಲಕ್ಷ್ಮಿ,ಕೆ.ವಿ.ಬಾಲಾಜಿ, ಜಯಮ್ಮ, ಶಕುಂತಲ, ಅಕ್ಕಯ್ಯಮ್ಮ, ಸೀತಮ್ಮ ಸೇರಿದಂತೆ ನೂರಾರು ಗ್ರಾಮಸ್ಥರು ಬಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.