ಆಂಜಿನಪ್ಪ ಆರೋಪಗಳೆಲ್ಲ ಸುಳ್ಳು
ಚಿಕ್ಕಬಳ್ಳಾಪುರ: ತಮ್ಮ ವಿರುದ್ಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಆಂಜಿನಪ್ಪ ಮಾಡಿರುವ ಆರೋಪಗಳೆಲ್ಲಾ ಸುಳ್ಳು.ಅವರು ವಿಧಾನಪರಿಷತ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹತಾಶ ಭಾವನೆಯಿಂದ ಆ ರೀತಿ ಹೇಳಿದ್ದಾರೆ ಎಂದು ಸಂಸದ ಎಂ. ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿ ಬಳಕೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಆಂಜಿನಪ್ಪ ಹೇಳಿಕೆಗೆ ತಿರುಗೇಟು ನೀಡಿದರು. ಆಂಜಿನಪ್ಪ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಲು ಟಿಕೆಟ್ ಬಯಸಿದ್ದರು. ಆದರೆ, ಅವರಿಗೆ ಸಿಗಲಿಲ್ಲ. ಇದರಿಂದ ಹತಾಶ ಮನೋಭಾವನೆಯಿಂದ ಸುಳ್ಳು ಆರೋಪವನ್ನು ಮಾಡಿದ್ದಾರೆ. ಅವರ ಬಗ್ಗೆ ತಮಗೆ ಇನ್ನೂ ಕನಿಕರವಿದೆ ಎಂದು ಹೇಳಿದರು. ಉಳಿದಂತೆ ಇದರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಹೇಳಿದರು. ವೀರಪ್ಪ ಮೊಯ್ಲಿಗೆ ಲೋಕಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಕೊಡಿಸಿದ್ದು ರಿಲಯನ್ಸ್ ಕಂಪನಿಯ ಅನಿಲ್ ಅಂಬಾನಿ. ಸಚಿವರಾಗಿದ್ದಾಗ ಮೊಯ್ಲಿ ಆ ಕಂಪನಿಗೆ ಅನುಕೂಲ ಮಾಡಿಕೊಟ್ಟು, ದೇಶಕ್ಕೆ ಕೋಟ್ಯಂತರ ರು. ನಷ್ಟವನ್ನುಂಟು ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಂಜಿನಪ್ಪ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

