ಕೊಳವೆ ಬಾವಿ ಮುಚ್ಚಲು ಆದೇಶ
ಕನ್ನಡಪ್ರಭವಾರ್ತೆ,ಕೋಲಾರ,ಜೂ.19
ಅಂತರ್ಜಲ ಸಿಗದೆ ವಿಫಲವಾಗಿರುವ ಕೊಳವೆ ಬಾವಿಗಳನ್ನು ಮುಚ್ಚದೆ ಇರುವುದರಿಂದ ಆಗಿರುವ ಕಹಿ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಕೂಡಲೇ ತೆರೆದ ಕೊಳವೆ ಬಾವಿಗಳನ್ನು ಮುಚ್ಚಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಆದೇಶಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ತಾಪಂ ಸಿಇಒಗಳು ತಮ್ಮ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿ ಎಲ್ಲಿ ತೆರೆದ ಕೊಳವೆ ಬಾವಿ ಕಾಣಿಸುತ್ತದೋ ಅವುಗಳನ್ನು ತಕ್ಷಣ ಮುಚ್ಚಿಸುವಂತೆ ಸೂಚಿಸಿದರು.
ತೆರೆದ ಕೊಳವೆ ಬಾವಿಗಳನ್ನು ಮುಚ್ಚಿಸಲು ನಿರ್ಲಕ್ಷ್ಯ ತೋರಿದರೆ ಹೊಣೆ ಹೊರಬೇಕಾಗುತ್ತದೆ, ಯಾರು ಕೊಳವೆ ಬಾವಿ ಕೊರೆಸುತ್ತಾರೋ ಅವರೇ ನೀರು ಸಿಗದೆ ಕೊಳವೆ ಬಾವಿಯನ್ನು ಕೂಡಲೇ ಮುಚ್ಚಿಸುವ ಜವಾಬ್ದಾರಿ ಹೊರಬೇಕೆಂದು ಹೇಳಿದರು. ಜಿಲ್ಲಾಧಿಕಾರಿ ಡಿ.ಕೆ.ರವಿ ಮಾತನಾಡಿ, ಸಚಿವರು ನೀಡಿರುವ ಆದೇಶ ಪಾಲಿಸದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಗ್ರಾಪಂ ಪಿಡಿಒ,ಕಾರ್ಯದರ್ಶಿ, ತಾಪಂ ಇಒಗಳು ತೆರೆದ ಕೊಳವೆ ಬಾವಿಗಳ ಮಾಹಿತಿ ಪಡೆದು ಯಾವುದೇ ಅಪಾಯ ಉಂಟಾಗದ ರೀತಿಯಲ್ಲಿ ಬಂದೋಬಸ್ತ್ ಮಾಡಬೇಕು. ಇನ್ನೊಂದು ವಾರದಲ್ಲಿ ಜಿಲ್ಲೆಯ ಎಲ್ಲಾ ತೆರೆದ ಕೊಳವೆ ಬಾವಿಗಳನ್ನು ಮುಚ್ಚಿಸಿ ತಮಗೆ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

